ರಾಜ್ಯ

ಎಲ್ಲಾ ಪ್ರಯಾಣಿಕರಲ್ಲಿ ಸೋಂಕು ಪತ್ತೆ ಹಚ್ಚಲು ಪೂಲ್ ಟೆಸ್ಟಿಂಗ್

ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಪೂಲ್ ಟೆಸ್ಟಿಂಗ್ ಗಾಗಿ ಸ್ಯಾಂಪಲ್ ಸಂಗ್ರಹಿಸಲಾಗುತ್ತಿದೆ.ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಹಾಸನಗಳಲ್ಲಿ ಹರಡುವಿಕೆಯ ಪ್ರಮಾಣವು ಶೇಕಡಾ 2 ಕ್ಕಿಂತ ಕಡಿಮೆಯಿದೆ ಎಂದು ತಿಳಿದು ಬಂದಿದೆ.

ಎಲ್ಲಾ ಪ್ರಯಾಣಿಕರಲ್ಲಿ ಸೋಂಕು ಪತ್ತೆ ಹಚ್ಚಲು ಪೂಲ್ ಟೆಸ್ಟಿಂಗ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಪೂಲ್ ಟೆಸ್ಟಿಂಗ್ ಗಾಗಿ ಸ್ಯಾಂಪಲ್ ಸಂಗ್ರಹಿಸಲಾಗುತ್ತಿದೆ.ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಹಾಸನಗಳಲ್ಲಿ ಹರಡುವಿಕೆಯ ಪ್ರಮಾಣವು ಶೇಕಡಾ 2 ಕ್ಕಿಂತ ಕಡಿಮೆಯಿದೆ ಎಂದು ತಿಳಿದು ಬಂದಿದೆ.

ಮೇ 13ರ ವೇಳೆಗೆ 3,850 ಜನರಲ್ಲಿ 770 ಪೂಲ್  ರಾಜ್ಯದಲ್ಲಿ ತೆಗೆದುಕೊಳ್ಳಲಾಗಿದೆ, ,  ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯದಿಂದ ಮರಳಿದವರಲ್ಲಿ ಸೋಂಕು ಪತ್ತೆ ಹಚ್ಚುವ ಸಲುವಾಗಿ” ರಾಜ್ಯದಾದ್ಯಂತ ಪೂಲ್ ಪರೀಕ್ಷೆಯನ್ನು ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ.

ಕೋವಿಡ್ -19 ಹೊಂದಿರಬಹುದೆಂದು ಶಂಕಿಸಲಾಗಿರುವ ಐದು ರೋಗಿಗಳ ಮಾದರಿಗಳನ್ನು ದ್ರವಕ್ಕೆ ಹಾಕಲಾಗುತ್ತದೆ, ಇದನ್ನು ಪೂಲ್ ಪರೀಕ್ಷೆ ಎಂದು ಕರೆಯಲಾಗುತ್ತದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಇದರಲ್ಲಿ ನೆಗೆಟಿವ್ ಬಂದರೆ ಎಲ್ಲಾ ನೆಗೆಟಿವ್ ಎದು , ಪಾಸಿಟಿವ್ ಬಂದರೆ  ಎಲ್ಲಾ ಪಾಸಿಟಿವ್ ಎಂದು ನಿರ್ಧರಿಸಲಾಗುತ್ತದೆ. ಮತ್ತೆ ಎಲ್ಲಾ ಸ್ಯಾಂಪಲ್ಸ್ ಅನ್ನು ಮತ್ತೆ ಪರೀಕ್ಷೆಗೊಳಪಡಿಸಲಾಗುತ್ತದೆ.

ಆರ್‌ಟಿ-ಪಿಸಿಆರ್ ಪರೀಕ್ಷಾ ಕಿಟ್‌ಗಳನ್ನು ಬಳಸಿಕೊಂಡು ಹೆಚ್ಚಿನ ಮಾದರಿಗಳನ್ನು ಪರೀಕ್ಷಿಸಬಹುದಾಗಿದೆ. ತುಂಬಾ ಶೀಘ್ರವಾಗಿ ಈ ಟೆಸ್ಟ್ ಮಾಡಲಾಗುತ್ತದೆ, ಇದರಿಂದ ಟೆಸ್ಟಿಂಗ್ ಕಿಟ್ಸ್ ಗಳನ್ನು ಉಳಿಸಿದಂತಾಗುತ್ತದೆ.
.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.