ಬೆಂಗಳೂರು: ಕಂಟೈನ್ ಮೆಂಟ್ ವಲಯಗಳಲ್ಲಿ ಸ್ವಾಬ್ ಸಂಗ್ರಹ ಆರಂಭ
ಕಂಟೈನ್ ಮೆಂಟ್ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರಿಂದ ಸ್ವಾಬ್ ಸಂಗ್ರಹ ಪಾದರಾನಪುರದ ಮೂಲಕ ಗುರುವಾರ ಆರಂಭವಾಗಿದೆ.

ಬೆಂಗಳೂರು: ಕಂಟೈನ್ ಮೆಂಟ್ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರಿಂದ ಸ್ವಾಬ್ ಸಂಗ್ರಹ ಪಾದರಾನಪುರದ ಮೂಲಕ ಗುರುವಾರ ಆರಂಭವಾಗಿದೆ.
ಮೊದಲ ದಿನ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು 11 ಸ್ವಾಬ್ ಮಾದರಿಗಳನ್ನು ಸಂಗ್ರಹಿಸಿದರು. ಗೋರಿಪಾಳ್ಯ ರೆಫೆರಲ್ ಆಸ್ಪತ್ರೆ ಮತ್ತು ಜಗಜೀವನರಾಂ ಪೊಲೀಸ್ ಠಾಣೆ ಬಳಿಕ ಸಂಚಾರಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ.
ಅಲ್ಫಾತ್ ನಗರದ ಜನರಿಂದಲೂ ಮಾದರಿ ಸಂಗ್ರಹಿಸಲಾಗುತ್ತಿದೆ.ಮಾದರಿ ಸಂಗ್ರಹಕ್ಕಾಗಿ ಶುಕ್ರವಾರ ಎರಡು ಬಸ್ ಗಳ ಮೂಲಕ ಜನರನ್ನು ಕರೆತರಲಾಗುವುದು, 60 ವರ್ಷಕ್ಕಿಂತ ಮೇಲ್ಪಟ್ಟವರು, ಗರ್ಭಿಣಿಯರು ಮತ್ತು ಮಕ್ಕಳ ಹೆಚ್ಚಿನ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಬಿಬಿಎಪಿ ಆಯುಕ್ತ ಬಿಹೆಚ್ ಅನಿಲ್ ಕುಮಾರ್ ತಿಳಿಸಿದ್ದಾರೆ.
ಹೊಗಸಂದ್ರದಲ್ಲಿನ 130 ಬಿಹಾರಿ ವಲಸಿಗರ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


