ರಾಜ್ಯ

ಸ್ಯಾನ್ ಫ್ರಾನ್ಸಿಸ್ಕೊ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 107 ಪ್ರಯಾಣಿಕರು ಆಗಮನ

ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೊ ದಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ಕನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 107 ಮಂದಿ ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ.

ಸ್ಯಾನ್ ಫ್ರಾನ್ಸಿಸ್ಕೊ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 107 ಪ್ರಯಾಣಿಕರು ಆಗಮನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೊ ದಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ಕನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 107 ಮಂದಿ ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ. 

ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಒಟ್ಟು 107 ಮಂದಿ ಪ್ರಯಾಣಿಕರಲ್ಲಿ 59 ಪುರುಷ ಮತ್ತು 48 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಒಬ್ಬರು ಗರ್ಭಿಣಿ ಮಹಿಳೆ ಹಾಗೂ 10 ವರ್ಷದೊಳಗಿನ ಒಂದು ಮಗು ಇದೆ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಇಂದು ಆಗಮಿಸಿದ 107 ಪ್ರಯಾಣಿಕರನ್ನು ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳಿಂದ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ವೇಳೆ ಒಬ್ಬ ಪುರುಷನಲ್ಲಿ ಕೊರೋನಾ ವೈರಾಣು ಸೋಂಕಿನ
ಲಕ್ಷಣಗಳು ಕಂಡುಬಂದ ಹಿನ್ನೆಲೆ ಆ ವ್ಯಕ್ತಿಯನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್ ಗಾಗಿ ಕಳುಹಿಸಿಕೊಡಲಾಗಿದೆ.

106 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ರೂಟ್ ಅಧಿಕಾರಿಗಳ ಮುಂದಾಳತ್ವದಲ್ಲಿ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.