ಲಾಕ್‌ಡೌನ್ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ
ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು: ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ ಮಾಡಲಾಗಿದೆ.
ಈ ಹಿಂದೆ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಣಾ ಹಾಗೂ ಜಿಲ್ಲಾ ನ್ಯಾಯಾಲಯಗಳಿಗೆ ಮೇ 16ರವರೆಗೆ ನೀಡಲಾಗಿದ್ದ ರಜೆಯನ್ನು ಜೂನ್ 6 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ಆದೇಶದ ಮೇಕರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ನಿನ್ನೆ ನೋಟಿಫಿಕೇಷನ್ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಸಂಚಾರಿ ಪೀಠಗಳು ಸೇರಿ ಎಲ್ಲ ಜಿಲ್ಲಾ, ವಿಚಾರಣಾ, ಕೌಟುಂಬಿಕ, ಕಾರ್ಮಿಕ ನ್ಯಾಯಾಲಯಗಳು ಮತ್ತು ಕೈಗಾರಿಕಾ ನ್ಯಾಯಾಧೀಕರಣಗಳಿಗೆ ಜೂನ್ 6 ರವರೆಗೆ ರಜೆ ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


