ರಾಜ್ಯ

ಕುಡಿಯುವ ನೀರಿನ ಘಟಕದಲ್ಲಿ ಅವ್ಯವಸ್ಥೆ: ಸಚಿವ ಬಿ.ಸಿ.ಪಾಟೀಲ್ ಗರಂ

ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಸ್ವ ಕ್ಷೇತ್ರ ಹಿರೇಕೆರೂರಿನಲ್ಲಿ ನಡೆದಿದೆ.

ಕುಡಿಯುವ ನೀರಿನ ಘಟಕದಲ್ಲಿ ಅವ್ಯವಸ್ಥೆ: ಸಚಿವ ಬಿ.ಸಿ.ಪಾಟೀಲ್ ಗರಂ
ಸಚಿವ ಬಿ. ಸಿ. ಪಾಟೀಲ್
Published On :

ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಕೃಷಿ ಸಚಿವ ಬಿ.ಸಿ.ಪಾಟೀಲ್  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಸ್ವ ಕ್ಷೇತ್ರ ಹಿರೇಕೆರೂರಿನಲ್ಲಿ ನಡೆದಿದೆ.

ಇಂದು ಹಿರೇಕೆರೂರಿನಲ್ಲಿ ವಿವಿಧ  ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್  ಇಲಾಖೆಯ 2019- 20 ನೇ ಸಾಲಿನ 5,045 ಯೋಜನೆಯಡಿ ಚನ್ನಳ್ಳಿ ಗ್ರಾಮದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ  ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು. ಘಟಕದಲ್ಲಿ ಸರಿಯಾಗಿ ಕುಡಿಯುವ ನೀರು ಬರದಿರುವುದನ್ನು ಹಾಗೂ ಸುತ್ತಮುತ್ತ ಅಸ್ವಚ್ಛತೆ  ಕಂಡು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.