ರಾಜ್ಯ

ಮಂಡ್ಯ ಮೈಷುಗರ್ ಕಾರ್ಖಾನೆ ಸಂಪೂರ್ಣ ಖಾಸಗೀಕರಣ ಇಲ್ಲ

ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪೂರ್ಣ ಖಾಸಗೀಕರಣ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಮಂಡ್ಯ ಮೈಷುಗರ್ ಕಾರ್ಖಾನೆ ಸಂಪೂರ್ಣ ಖಾಸಗೀಕರಣ ಇಲ್ಲ
ಮೈ ಶುಗರ್ ಕಾರ್ಖಾನೆ
Published On :

ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆ ಪೂರ್ಣ ಖಾಸಗೀಕರಣ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಮಂಡ್ಯ ಮೈ ಶುಗರ್ ಕಾರ್ಖಾನೆಯ ಮಾಲೀಕತ್ವವನ್ನು ರಾಜ್ಯ ಸರ್ಕಾರವೇ ಇಟ್ಟುಕೊಳ್ಳಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಒಪ್ಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ನೀಡಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂದಿನ‌ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಚರ್ಚೆಗೆ ತರಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಕಾರ್ಯಾಚರಣೆ ಮತ್ತು ನಿರ್ವಹಣೆಯಡಿ ಮೈ ಶುಗರ್ ಕಾರ್ಖಾನೆ ಉಳಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಕಾರ್ಖಾನೆಯ ಮಾಲೀಕತ್ವ ಸರ್ಕಾರದ ಬಳಿಯೇ ಇರಲಿದೆ ಎಂದು ತಿಳಿದುಬಂದಿದೆ.

ಇನ್ನು ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಶಾಸಕ,ಮಾಜಿ ಸಚಿವರೂ ಆದ ಸಿ.ಎಸ್.ಪುಟ್ಟರಾಜು ಅವರು, ಸರ್ಕಾರದ ಸದ್ಯದ ನಡೆಯನ್ನು ನೋಡಿದರೆ ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಮತ್ತು ಪಿಎಸ್‌ಎಸ್‌ಕೆ ಕಾರ್ಖಾನೆಗಳು ಆರಂಬವಾಗುವುದು ಅನುಮಾನ ಎಂದು ಹೇಳಿದ್ದರು. ಅಲ್ಲದೆ ಮೈ ಶುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ಬಿಡುವುದಿಲ್ಲ ಎಂದೂ ಎಚ್ಚರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.