ರಾಮನಗರ: ಮಲಗಿದ್ದ ವೃದ್ಧೆ ಚಿರತೆಗೆ ಬಲಿ
ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಮತ್ತೆ ಚಿರತೆ ಅಟ್ಟಹಾಸ ಮೆರೆದಿದೆ. ಮನೆಯ ಹೊರಗಡೆ ಮಲಗಿದ್ದ ವೃದ್ಧೆ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
68 ವರ್ಷದ ಗಂಗಮ್ಮ ಮೃತ ವೃದ್ಧೆ. ಚಿರತೆ ವೃದ್ಧೆಯ ಶವವನ್ನು ಭಾಗಶಃ ತಿಂದಿದ್ದು, ಮನೆಯ ಹತ್ತಿರದಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ.ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಮಾಗಡಿ ಪೊಲೀಸರು ಭೇಟಿ ನೀಡಿದ್ದಾರೆ.
ಕಳೆದ ಶನಿವಾರವಷ್ಟೇ ಮಾಗಡಿ ತಾಲ್ಲೂಕಿನ ಕದರಯ್ಯನ ಪಾಳ್ಯದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಮೂರು ವರ್ಷದ ಬಾಲಕನನ್ನು ಎಳೆದೊಯ್ದು ಕೊಂದು ಹಾಕಿತ್ತು.ಇದೀಗ ಮತ್ತೆ ಚಿರತೆ ದಾಳಿ ಮುಂದುವರೆಸಿದ್ದು, ಸ್ಥಳೀಯರು ಇನ್ನಷ್ಟು ಭಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


