ರಾಜ್ಯದಲ್ಲಿ 55 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 1147ಕ್ಕೇರಿಕೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147ಕ್ಕೆರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147ಕ್ಕೆರಿಕೆಯಾಗಿದೆ.
ಉಡುಪಿಯ 54 ವರ್ಷದ ನಿವಾಸಿ ಮೇ 14ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 37ಕ್ಕೇರಿಕೆಯಾಗಿದೆ. ಒಟ್ಟು 509 ಜನರು ಗುಣಮುಖರಾಗಿದ್ದಾರೆ.
ಇದಲ್ಲದೆ ಮಂಡ್ಯದಲ್ಲಿ 22, ಕಲಬುರ್ಗಿದಲ್ಲಿ 10, ಹಾಸನದಲ್ಲಿ 6, ಯಾದಗಿರಿದಲ್ಲಿ 3, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಧಾರವಾಡದಲ್ಲಿ 4, ಶಿವಮೊಗ್ಗದಲ್ಲಿ 2, ವಿಜಯಪುರದಲ್ಲಿ 1ಪ್ರಕರಣಗಳು ವರದಿಯಾಗಿದೆ.
ಮಂಡ್ಯದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 22 ಕೊರೋನಾ ಸೋಂಕು ಪ್ರಕರಣ ದಾಖಲಾಗಿದ್ದು ಜಿಲ್ಲೆಯಲ್ಲಿ ಒಟ್ತಾರೆ ಸೋಂಕಿತರ ಸಂಖ್ಯೆ 72ಕ್ಕೆ ತಲುಪಿದೆ.
ಇನ್ನು ಭಾನುವಾರ ರಾಜ್ಯದಲ್ಲಿ ಒಟ್ಟಾರೆ 13 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರ ಇದೀಗ ರಾಜ್ಯದಲ್ಲಿ ಸದ್ಯ 600 ಸಕ್ರಿಯ ಕೊರೋನಾ ಪ್ರಕರಣಗಳು ಇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


