ಖಾಸಗಿ ಶಾಲಾ ಸಿಬ್ಬಂದಿಗಳಿಗೂ ನೆರವು ನೀಡಿ: ಸರ್ಕಾರಕ್ಕೆ ಎಂಎಲ್ಸಿಗಳ ಆಗ್ರಹ
ಲಾಕ್'ಡೌನ್ ಬಳಿಕ ವೇತನ ಸಿಗದೆ ಖಾಸಗಿ ಶಾಲಾ ಸಿಬ್ಬಂದಿಗಳೂ ಕೂಡ ಸಂಕಷ್ಟ ಎದುರಿಸುತ್ತಿದ್ದು, ಅವರಿಗೂ ನೆರವು ನೀಡುವಂತೆ ವಿಧಾನ ಪರಿಷತ್ ಸದಸ್ಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು: ಲಾಕ್'ಡೌನ್ ಬಳಿಕ ವೇತನ ಸಿಗದೆ ಖಾಸಗಿ ಶಾಲಾ ಸಿಬ್ಬಂದಿಗಳೂ ಕೂಡ ಸಂಕಷ್ಟ ಎದುರಿಸುತ್ತಿದ್ದು, ಅವರಿಗೂ ನೆರವು ನೀಡುವಂತೆ ವಿಧಾನ ಪರಿಷತ್ ಸದಸ್ಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಅನುದಾನರಹಿದ ಪ್ರಾಥಮಿಕ, ಪ್ರೌಢಶಾಲೆಗಳು, ಪಿಯುಸಿ ಹಾಗೂ ಪದವಿ ಕಾಲೇಜುಗಳ ಎಲ್ಲಾ ಸಿಬ್ಬಂದಿಗಳೂ ಕೂಡ ಕಳೆದ ಮೂರು ತಿಂಗಳುಗಳಿಂದ ವೇತನ ಪಡೆದಿಲ್ಲ. ಅವರಿಗೂ ರೂ.25,000ರಷ್ಟು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅನುದಾನರಹಿತ ಶಾಲೆಗಳಿಗೆ ನೀಡಬೇಕಿರುವ ಆರ್'ಟಿಇ ಮರುಪಾವತಿಯನ್ನು ಶೀಘ್ರಗತಿಯಲ್ಲಿ ಬಿಡುಗಡೆ ಮಾಡಬೇಕು. ಸರ್ಕಾರಿ ಪ್ರಥಮಿಕ ಹಾಗೂ ಪ್ರೌಢಶಿಕ್ಷಣ ಶಾಲೆಗಳ ಗೌರವಾನ್ವಿತ ಶಿಕ್ಷಕರು, ಅತಿಥಿ ಉಪನ್ಯಾಸಕರು, ಪಿಯುಸಿ, ಪದವಿ ಕಾಲೇಜುಗಳ ಉಪನ್ಯಾಸಕರಿಗೂ ರೂ.25,000 ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


