ಕೊಳ್ಳೇಗಾಲದಲ್ಲಿ ಪೇದೆಯ ಪತ್ನಿ ನೇಣಿಗೆ ಶರಣು: ಕಾರಣ ನಿಗೂಢ
ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲ: ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.
ಕೊಳ್ಳೇಗಾಲದ ಪಟ್ಟಣ ಪೊಲೀಸ್ ಠಾಣೆಯ ಪೇದೆ ಪರುಶುರಾಮ್ ಎಂಬುವವರ ಪತ್ನಿ ನಾಗರತ್ನ (19 ವರ್ಷ) ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಪರಶುರಾಮ್ ಮೂಲತಃ ರಾಯಚೂರಿನವರಾಗಿದ್ದು, ಕಳೆದ 3-4 ವರ್ಷಗಳಿಂದ ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದೇ ಜಿಲ್ಲೆಯ ತನ್ನ ಸಂಬಂಧಿಕರಾದ ನಾಗರತ್ನ ಅವರನ್ನು ಒಂದು ವರ್ಷದ ಹಿಂದೆ ಮದುವೆಯಾಗಿ ಇಲ್ಲಿನ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು.
ಎಂದಿನಂತೆ ಕರ್ತವಕ್ಕೆ ತೆರಳಿ ಮಧ್ಯಾಹ್ನ ಊಟದ ಸಮಯದಲ್ಲಿ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲು ತೆರೆಯದಿರುವುದನ್ನು ಕಂಡು ಪೇದೆ ಪರಶುರಾಮ್ ಗಾಬರಿಯಾಗಿದ್ದಾರೆ. ಬಳಿಕ ಬಾಗಿಲು ಒಡೆದು ನೋಡಿದಾಗ ನಾಗರತ್ನ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಮೃತರ ಸಂಬಂಧಿಕರು ಬಂದು ದೂರು ನೀಡಿದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


