ರಾಜ್ಯ

ಕೋಲಾರ: ಜೆಡಿಎಸ್ ನಗರಸಭೆ ಸದಸ್ಯನ ಮೇಲೆ ಹಲ್ಲೆ

ನಗರಸಭಾ ಸದಸ್ಯನ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ‌ ಜರುಗಿದೆ.

ಕೋಲಾರ: ಜೆಡಿಎಸ್ ನಗರಸಭೆ ಸದಸ್ಯನ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
Published On :

ಕೋಲಾರ: ನಗರಸಭಾ ಸದಸ್ಯನ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ‌ ಜರುಗಿದೆ.

ಭಾನುವಾರ ರಾತ್ರಿ ಜೆಡಿಎಸ್ ಮುಖಂಡರ ಎರಡು ಬಣಗಳ ಮಧ್ಯೆ ಗಲಾಟೆ, ಕೊಲೆ ಯತ್ನ ನಡೆದಿದ್ದು, ಮಾರಣಾಂತಿಕ ಹಲ್ಲೆಯಿಂದ ನಾಗರಾಜ್ ಸ್ಥಿತಿ ಗಂಭೀರವಾಗಿದೆ.

ಮಾರಣಾಂತಿಕ ಹಲ್ಲೆಗೊಳಗಾದ ನಾಗರಾಜ್ ಮುಳಬಾಗಿಲು ನಗರಸಭೆ ಜೆಡಿಎಸ್ ಸದಸ್ಯನಾಗಿದ್ದು, ತಾಲೂಕು ಜೆಡಿಎಸ್ ಅಧ್ಯಕ್ಷ್ಯ ಕಾಡೇನಳ್ಳಿ ನಾಗರಾಜ್ ಬೆಂಬಲಿಗರಿಂದ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಆಹಾರ ವಿತರಣೆ ಕಾರ್ಯಕ್ರಮ ಸಂಬಂಧ ಚರ್ಚೆ ಮಾಡುವಾಗ ಪರಸ್ಪರ ಗಲಾಟೆ ನಡೆದಿದ್ದು, ಗಂಭೀರವಾಗಿ ಗಾಯಗೊಳಾಗಿರುವ ನಾಗರಾಜ್ ರನ್ನು ಬೆಂಗಳೂರಿನ ಹಾಸ್ ಮ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.