ಧಾರವಾಡ: ಕಾಸರಗೋಡು, ಮಂಗಳೂರಿನ 74 ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಲಾರಿಗಳ ವಶ
ಮಂಗಳೂರು ಮತ್ತು ಕಾಸರಗೋಡಿನಿಂದ 74 ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗದಗ ಪೋಲೀಸರು ವಶಪಡಿಸಿಕೊಂಡಿದ್ದಾರೆ

ಧಾರವಾಡ: ಮಂಗಳೂರು ಮತ್ತು ಕಾಸರಗೋಡಿನಿಂದ 74 ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗದಗ ಪೋಲೀಸರು ವಶಪಡಿಸಿಕೊಂಡಿದ್ದಾರೆ
ಈ ಟ್ರಕ್‌ಗಳಲ್ಲಿ 27 ವಲಸೆ ಕಾರ್ಮಿಕರು ಕಾಸರಗೋಡಿನವರಾದರೆ 47 ಮಂದಿ ಮಂಗಳೂರಿನಿಂದ ಬಂದಿದ್ದರು. ಅವರನ್ನು ರಾಜಾಸ್ಥಾನಕ್ಕೆ ಕರೆದೊಯ್ಯಲಾಗುತ್ತಿತ್ತು. ಗದಗ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿ ಪರಿಶೀಲಿಸಿದಾಗ, ಲಾರಿಗಳು ಜನರನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ನೋಂದಣಿ ಸಂಖ್ಯೆ RJ 14 BJ 2909 ಮತ್ತು HR 46 CS 703 ಟ್ರಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವರು ಧಾರವಾಡದ ಪಟ್ಟಣಶೆಟ್ತಿ ಮದುವೆ ಮಂಟಪದಲ್ಲಿ ವಲಸೆ ಕಾರ್ಮಿಕರ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಎರಡೂ ಟ್ರಕ್ ಚಾಲಕರ ವಿರುದ್ಧ ದೂರು ದಾಖಲಿಸಲಾಗಿದೆ. ಎಲ್ಲ ಕಾರ್ಮಿಕರನ್ನು ರಾಜಸ್ಥಾನಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


