ಎಲ್ಲ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು: ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್
ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.
ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿ ಶೇಕಡಾ 100 ರಷ್ಟು ಹಾಜರಾತಿ ಇರಬೇಕು ಎಂದು ಅವರು ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ಲಾಕ್ ಡೌನ್ ನಿರ್ಬಂಧ ಜಾರಿಯಲ್ಲಿದ್ದ ಕಾರಣಕ್ಕೆ ಈವರೆಗೆ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಶೇ. 100 ಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು, ಉಳಿದ ಇಲಾಖೆಗಳ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ. 33 ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ಸೂಚಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


