ರಾಜ್ಯ

ರಾಯಬಾಗ: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ!

ವಿವಾಹಿತ ಮಹಿಳೆಯೋರ್ವಳು ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ದೇವನಕಟ್ಟೆ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ರಾಯಬಾಗ: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ!
ಸಂಗ್ರಹ ಚಿತ್ರ
Published On :

ರಾಯಬಾಗ: ವಿವಾಹಿತ ಮಹಿಳೆಯೋರ್ವಳು ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ದೇವನಕಟ್ಟೆ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಉಮಾಶ್ರೀ ಕೃಷ್ಣ ಹೊಸೂರೆ(೨೨) ಮೃತ ದುರ್ದೈವಿ. ನಿನ್ನೆ ತನ್ನ ತವರು ಮನೆಯಾದ ದೇವನಕಟ್ಟೆಗೆ ಬಂದಿದ್ದ, ಆಕೆ ಇಂದು ಬೆಳಿಗ್ಗೆ ತಮ್ಮ ತೋಟದಲ್ಲಿದ್ದ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಯಬಾಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ, ಪಿಎಸ್‌ಐ ಗಜಾನನ ನಾಯಿಕ ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಮೃತಳನ್ನು ಒಂದು ವರ್ಷದ ಹಿಂದೆ ಗೋಕಾಕ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣ ಹೊಸೂರೆ ಇತನೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.