ರಾಜ್ಯ

ಕೊರೋನಾ ಭೀತಿ: ಸಿಇಟಿಗಾಗಿ 75 ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ

2020ನೇ ಸಾಲಿನ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿದ್ದು 75 ಹೊಸ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ 19 ಪರಿಸ್ಥಿತಿಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಸಮೀಪ ಇರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆಗೆ ಹಾಜರಾಗಲು ಈಗಾಗಲೇ ಅವಕಾಶ ನೀಡಲಾಗಿದೆ.

ಕೊರೋನಾ ಭೀತಿ: ಸಿಇಟಿಗಾಗಿ 75 ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: 2020ನೇ ಸಾಲಿನ ಸಿಇಟಿ ಪರೀಕ್ಷೆಗಳು ಜುಲೈ 30 ಹಾಗೂ 31ರಂದು ನಡೆಯಲಿದ್ದು 75 ಹೊಸ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ 19 ಪರಿಸ್ಥಿತಿಯನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ಸಮೀಪ ಇರುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆಗೆ ಹಾಜರಾಗಲು ಈಗಾಗಲೇ ಅವಕಾಶ ನೀಡಲಾಗಿದೆ.

ಹೊಸದಾಗಿ ಸೇರ್ಪಡೆಗೊಂಡಿರುವ 75 ಪರೀಕ್ಷಾ ಕೇಂದ್ರಗಳ ಮಾಹಿತಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿದೆ. ಈ ಹೊಸ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿದ ಬಳಿಕ ವಿದ್ಯಾರ್ಥಿಗಳು ಅಗತ್ಯವೆಂದು ಕಂಡುಬಂದಲ್ಲಿ ತಾವು ಈ ಮೊದಲು ನಮೂದಿಸಿದ್ದ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಆದ್ಯತೆಯ ಮೇರೆಗೆ  ತಾವು ಹಾಜರಾಗಬಯಸುವ ಪರೀಕ್ಷಾ ಕೇಂದ್ರಗಳಿಗೆ ಮೂರು ಆಯ್ಕೆಗಳನ್ನು ಅಲ್ಲೇ ನೀಡಬಹುದಾಗಿರುತ್ತದೆ. ಅಭ್ಯರ್ಥಿಯು ನೀಡುವ ಆದ್ಯತೆ ಮತ್ತು ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸಿಇಟಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಸಿಇಟಿ-2020 ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಳ್ಳಲು ಹಾಗೂ ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ಮೇ 20ರ ಸಾಯಂಕಾಲ 6.00ರಿಂದ ಮೇ 22ರ ಸಾಯಂಕಾಲ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.