ಅಕ್ರಮ ಗ್ಯಾಸ್ ರೀಫಿಲಿಂಗ್ ಕೇಂದ್ರದ ಮೇಲೆ ಸಿಸಿಬಿ ಕ್ಷಿಪ್ರ ದಾಳಿ: 6 ಮಂದಿ ಬಂಧನ; 384 ಸಿಲಿಂಡರ್ ವಶ
ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಆರು ಮಂದಿ ಆರೋಪಿಗಳನ್ನು ಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿದ್ಧಾರ್ಥ ಲೇಔಟ್‌ನ ನಿವಾಸಿ ರಾಜು (32), ನಾಗರಭಾವಿ ಮಾರುತಿ ನಗರ 1ನೇ ಮೈನ್ ನಿವಾಸಿ ಅಮರ್ ಸಿ.ಎ (32), ಹೆಗ್ಗನಹಳ್ಳಿ ಮುಖ್ಯ ರಸ್ತೆಯ ವಿಶ್ವನೀಡಂ ಅಂಚೆ, ಮೋಹನ್ ಥಿಯೇಟರ್ ಹತ್ತಿರ ನಿವಾಸಿ ಲಕ್ಷ್ಮಯ್ಯ ಎಚ್ , ನಾಗರಬಾವಿ ಅನ್ನಪೂರ್ಣೇಶ್ವರಿ ನಗರ ಚೆಲುವ ನಾರಾಯಣ ಸ್ವಾಮಿ ಪ್ರಸನ್ನ 1ನೇ ಕ್ರಾಸ್ ನಿವಾಸಿ ವಿನಯ್, ಆರ್.ಆರ್.ನಗರ ಹಲಗೆವಡೆರಹಳ್ಳಿ 4ನೆ ಕ್ರಾಸ್ ಸೂರ್ಯ ನಾರಾಯಣ ಸ್ಟೋರ್ಸ್ ನಿವಾಸಿ ಪ್ರಕಾಸ್, (34), ರಾಜಗೋಪಾಲನಗರ ನಿವಾಸಿ ತಿಮ್ಮಪ್ಪ (42) ಬಂಧಿತ ಆರೋಪಿಗಳ
ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಯಾವುದೇ ಸುರಕ್ಷತೆ ಕ್ರಮಗಳನ್ನು ಅನುಸರಿಸದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್.ಆರ್.ನಗರ ಹಾಗೂ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


