ರಾಜ್ಯ

ಅಧಿಕಾರಿಗಳ ಮಧ್ಯಪ್ರವೇಶ: ಬಳ್ಳಾರಿಯಲ್ಲಿ 3 ಬಾಲ್ಯವಿವಾಹಗಳಿಗೆ ತಡೆ

ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ‌ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ತಡೆ ಬಿದ್ದಿದೆ.

ಅಧಿಕಾರಿಗಳ ಮಧ್ಯಪ್ರವೇಶ: ಬಳ್ಳಾರಿಯಲ್ಲಿ 3 ಬಾಲ್ಯವಿವಾಹಗಳಿಗೆ ತಡೆ
ಸಂಗ್ರಹ ಚಿತ್ರ
Published On :

ಬಳ್ಳಾರಿ: ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ‌ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ತಡೆ ಬಿದ್ದಿದೆ.

ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಂಡವು ಪೊಲೀಸ್ ಇಲಾಖೆಯೊಡಗೂಡಿ ನಡೆಸಿದ ಕಾರ್ಯಾಚರಣೆಯಲ್ಲಿ‌ ಮದುವೆಯನ್ನು ನಿಲ್ಲಿಸಲಾಗಿದೆ. ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಅನುಸಾರ ಕಾರ್ಯಪ್ರವೃತ್ತರಾದ ಸಿಡಿಪಿಒ ಅಮರೇಶ ಅವರು, ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಕಾನೂನು ತಿಳಿವಳಿಕೆ ನೋಟಿಸ್ ನೀಡಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡರು.

ಈ ಸಂದರ್ಭದಲ್ಲಿ ಸಿಡಿಪಿಒ ಅಮರೇಶ ಅವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಪೊಲೀಸ್ ಇಲಾಖೆಯ‌ ನಾಗನಗೌಡ ಸೇರಿದಂತೆ ಅನೇಕರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.