ರಾಜ್ಯ

ಗ್ರಾಪಂ ಸದಸ್ಯನ ಕೊಲೆ: ತಲೆಮರೆಸಿಕೊಂಡಿದ್ದ ಟಿವಿ ವಾಹಿನಿಯ ಸಿಇಒ ಬಂಧನ

ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಗ್ರಾಪಂ ಸದಸ್ಯನ ಕೊಲೆ: ತಲೆಮರೆಸಿಕೊಂಡಿದ್ದ ಟಿವಿ ವಾಹಿನಿಯ ಸಿಇಒ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

28 ವರ್ಷದ ಮೋಹನ್ ಕುಮಾರ್ ಬಂಧಿತ ಆರೋಪಿ. ಮಾಚೋಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮೀನಾರಾಯಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏಪ್ರಿಲ್ 2019ರಲ್ಲಿ ನಡೆದಿದ್ದ ಕೊಲೆ ಪ್ರಕರಣದ ಜಾಡು ಹಿಡಿದ ಸಿಸಿಬಿ ಪೊಲೀಸರು ತಲೆಮರಿಸಿಕೊಂಡಿದ್ದ ಮೋಹನ್ ಕುಮಾರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ, ತಾನು ಜೆಟಿವಿ ಹಾಗೂ ಟಿವಿ6 ನ ವ್ಯವಸ್ಥಾಪಕ ನಿರ್ದೇಶಕನಾಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದು, ಮುಂದಿನ ತನಿಖೆಗಾಗಿ ಆತನನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.