ಕೊವಿಡ್-19 ನಿಯಮದಿಂದ ಗಡಿ ದಾಟದೆ ಚೆಕ್ಪೋಸ್ಟ್ನಲ್ಲೇ ಮದುವೆಯಾದ ತಮಿಳ್ಗನ್ನಡಿಗರು!
ಅಂತರರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ಗಡಿಯಲ್ಲೇ ಜೋಡಿಯೊಂದು ಮದುವೆಯಾದ ಘಟನೆ ತಮಿಳುನಾಡಿನ ಪುಣಜನೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ.

ಚಾಮರಾಜನಗರ: ಅಂತರರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ಗಡಿಯಲ್ಲೇ ಜೋಡಿಯೊಂದು ಮದುವೆಯಾದ ಘಟನೆ ತಮಿಳುನಾಡಿನ ಪುಣಜನೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಕರ್ನಾಟಕದ ಮತ್ತು ತಮಿಳುನಾಡು ರಾಜ್ಯಗಳ ಜೋಡಿಯೊಂದು ಅಂತರರಾಜ್ಯ ಗಡಿದಾಟದೆ ಪುಣಜನೂರು ಚೆಕ್ಪೋಸ್ಟ್ನ ಬಾರ್ಡರ್ನಲ್ಲೇ ಮದುವೆಯಾಗಿದ್ದಾರೆ. ಬಳಿಕ ವಧು-ವರರು ತಮ್ಮ-ತಮ್ಮ ಊರಿಗೆ ತೆರಳಿದ್ದಾರೆ.
ಅಂತರ್ ರಾಜ್ಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ರಾಜ್ಯದ ಕೊಡಗು ಜಿಲ್ಲೆಯ ಗೋಣಿಕೊಪ್ಪದ ಹೊಂಬಾಳಯ್ಯ, ತ್ರಿವೇಣಿ ದಂಪತಿ ಪುತ್ರಿ ಯಶಸ್ಮಿತ ಹಾಗೂ ತಮಿಳುನಾಡಿನ ಮೆಟ್ಟುಪಾಳ್ಯಂ ನಿವಾಸಿ ಶಕ್ತಿವೇಲು-ಲತಾ ದಂಪತಿ ಪುತ್ರ ಸತೀಶ್ ಕುಮಾರ್ ಗಡಿ ದಾಟದೆ, ಪುಣಜನೂರು ಚೆಕ್ಪೋಸ್ಟ್ನ ಗಣೇಶ ಗುಡಿಯಲ್ಲೇ ವಿವಾಹವಾಗಿದ್ದಾರೆ. ವಿವಾಹವಾದ ಬಳಿಕ ವಧು-ವರರು ತಮ್ಮ-ತಮ್ಮ ಊರಿಗೆ ಮರಳಿದ್ದಾರೆ. ಈ ಮದುವೆಗೆ ಚೆಕ್ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾಕ್ಷಿಯಾದರು.
-ಗುಳಿಪುರ ನಂದೀಶ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


