ಕ್ವಾರಂಟೈನ್ ನಿಯಮಗಳ ಬಗ್ಗೆ ಸರ್ಕಾರದ ಬಳಿಯೇ ಸ್ಪಷ್ಟ ಮಾಹಿತಿಯಿಲ್ಲ!
ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಂಕಿತರನ್ನು ಕ್ವಾರಂಟೈನ್ ನಲ್ಲಿರಿಸುವ ನಿಯಮಗಳ ಬಗ್ಗೆ ಸರ್ಕಾರ ಬಳಿಯೇ ಸ್ಪಷ್ಟ ಮಾಹಿತಿಗಳಿಲ್ಲ ಎಂಬುದು ಇದೀಗ ತಿಳಿದುಬಂದಿದೆ.

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಂಕಿತರನ್ನು ಕ್ವಾರಂಟೈನ್ ನಲ್ಲಿರಿಸುವ ನಿಯಮಗಳ ಬಗ್ಗೆ ಸರ್ಕಾರ ಬಳಿಯೇ ಸ್ಪಷ್ಟ ಮಾಹಿತಿಗಳಿಲ್ಲ ಎಂಬುದು ಇದೀಗ ತಿಳಿದುಬಂದಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ ಸರ್ಕಾರ ಕ್ವಾರಂಟೈನ್ ಮಾರ್ಗದರ್ಶನಗಳನ್ನು ಬದಲಿಸಲು ಮುಂದಾಗಿದ್ದು, ಲಕ್ಷಣವಿಲ್ಲದ ಪ್ರಯಾಣಿಕರನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಆದರೆ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಬಗ್ಗೆ ಇನ್ನು ಸರ್ಕಾರ ಯಾವುದೇ ರೀತಿಯ ಚಿಂತನೆ ನಡೆಸಿಲ್ಲ. ಆರೋಗ್ಯ ಇಲಾಖೆಯಲ್ಲೂ ಈ ಬಗ್ಗೆ ಚಿಂತನೆಗಳೇ ನಡೆದಿಲ್ಲ ಎಂದಿದ್ದಾರೆ. ಲಕ್ಷಣವಿಲ್ಲದ ರೋಗಿಗಳ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಸಲಹೆಯನ್ನು ನೀಡಿರುವುದಷ್ಟೇ ಎಂದು ತಿಳಿಸಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್ ಮುಂದುವರೆಯಲಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಆದರೆ, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಹೋಮ್ ಕ್ವಾರಂಟೈನ್ ನಿಯಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಲಕ್ಷಣವಿಲ್ಲದ ಪ್ರಯಾಣಿಕರಿಗೆ ರಾಜ್ಯದಲ್ಲಿ ಮನೆಯಿಲ್ಲದಿದ್ದರೆ, ಅವರನ್ನು ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲು ಚಿಂತನೆಗಳು ನಡೆಯುತ್ತಿವೆ ಎಂದಿದ್ದಾರೆ.
ಮನೆಗಳಲ್ಲಿ ಕ್ವಾರಂಟೈನ್ ನಲ್ಲಿರಲು ಇಚ್ಛಿಸುವವರು ಮನೆಯಲ್ಲಿಯೇ ಇರಬಹುದು. ಈ ಬಗ್ಗೆ ನಾವು ಗುರುವಾರ ಸ್ಪಷ್ಟ ಮಾಹಿತಿಗಳನ್ನು ನೀಡುತ್ತೇವೆಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಹೊರ ರಾಜ್ಯದಿಂದ ಬರುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸು ಬಿಬಿಎಂಪಿ ಸಂಕಷ್ಟ ಎದುರಿಸುತ್ತಿದ್ದು, ಹೋಟೆಲ್ ಗಳು ಅಗತ್ಯ ಸೌಲಭ್ಯಗಳನ್ನು ಒದಗಿಸದಿರುವ ಕಾರಣ ಕೆಲವರು ಕ್ವಾರಂಟೈನ್'ನಲ್ಲಿರದೆ ಹೋಟೆಲ್ ಗಳಿಂದ ಓಡಿಹೋಗುತ್ತಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಅಧಿಕಾರಿಗಳು, ಈ ವಿಚಾರ ಸಂಬಂಧ ತಂಡವೊಂದನ್ನು ರಚನೆ ಮಾಡಲಾಗಿದ್ದು, ತಂಡವು ಸೌಲಭ್ಯ ಒದಗಿಸಲು ಹೋಟೆಲ್ ಗಳು ಹೆಚ್ಚಿನ ಹಣವನ್ನು ಪಡೆಯುತ್ತಿವೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


