ಬೆಂಗಳೂರು: 10 ದಿನಗಳಲ್ಲಿ ವಿವಿಧ ಜಿಲ್ಲೆಗಳಿಗೆ ತೆರಳಿದ 1 ಲಕ್ಷ ವಲಸೆ ಕಾರ್ಮಿಕರು
ವಲಸೆ ಕಾರ್ಮಿಕರಿಗಾಗಿ ಸರ್ಕಾರ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಕಳೆದ 10 ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ವಿವಿಧ ಜಿಲ್ಲೆಗಳಿಗೆ ಸುಮಾರು 1,18,992 ತಮ್ಮ ಸ್ಥಳಗಳಿಗೆ ತೆರಳಿದ್ದಾರೆ.

ಬೆಂಗಳೂರು: ವಲಸೆ ಕಾರ್ಮಿಕರಿಗಾಗಿ ಸರ್ಕಾರ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಕಳೆದ 10 ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ವಿವಿಧ ಜಿಲ್ಲೆಗಳಿಗೆ ಸುಮಾರು 1,18,992 ತಮ್ಮ ಸ್ಥಳಗಳಿಗೆ ತೆರಳಿದ್ದಾರೆ.
ಈ ವಲಸೆ ಕಾರ್ಮಿಕರಿಗಾಗಿ ಒಟ್ಟು 4,037 ಟ್ರಿಪ್ ಗಳಲ್ಲಿ ಬೆಂಗಳೂರಿನಿಂದ 2,390 ಟ್ರಿಪ್ ಬೆಂಗಳೂರಿನಿಂದ ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ದಿವೆ.ಪ್ರತಿ ಕಾರ್ಮಿಕರಿಗೂ ಸ್ಕ್ರೀನಿಂಗ್ ಮಾಡುವುದು ಮತ್ತು ಪರೀಕ್ಷಿಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಸಾವಿರಾರು ಮಂದಿ ಕೆಂಪೇಗೌಡ ಬಸ್ ನಿಲ್ದಾಣದಲ್ಲಿದ್ದರು, ಇವರಿಗೆಲ್ಲಾ ಸಾಮಾಜಿಕ ಅಂತರ
ಕಾಯ್ದುಕೊಳ್ಳುವುದು ಸೇರಿದಂತೆ ಹೈಜೀನ್ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 150 ಕರೋನಾ ವಾರಿಯರ್ಸ್ ಇವರಿಗೆಲ್ಲಾ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿದ್ದರು.
ವಲಸೆ ಕಾರ್ಮಿಕರನ್ನು ನಿರ್ವಹಿಸುವುದು ಬಹು ದೊಡ್ಡ ಸವಾಲಾಗಿತ್ತು, ಬೇರೆ ರಾಜ್ಯಗಳಿಗೆ ರೈಲು ಸೇವೆ ಆರಂಭಿಸಿದ ನಂತರ ಮೆಜೆಸ್ಟಿಕ್ ನಿಂದ ಅವರನ್ನು ರೈಲು ನಿಲ್ದಾಣಕ್ಕೆ ಕರೆ ತರಲಾಯಿತು ಎಂದು ಕೊರೋನಾ ವಾರಿಯರ್ ಪ್ರದೀಪ್ ಆರ್ಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


