ರಾಜ್ಯ

ಇಂದಿನಿಂದ ರೈಲ್ವೆ ಟಿಕೆಟ್ ಇ-ಬುಕಿಂಗ್ ಆರಂಭ: ನೈಋತ್ಯ ರೈಲ್ವೆ

ಕೇಂದ್ರ ಸರ್ಕಾರ ಜೂನ್ 1ರಿಂದ ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳಿಗೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಇ ಬುಕ್ಕಿಂಗ್ ಆರಂಭವಾಗಿದೆ.

ಇಂದಿನಿಂದ ರೈಲ್ವೆ ಟಿಕೆಟ್ ಇ-ಬುಕಿಂಗ್ ಆರಂಭ: ನೈಋತ್ಯ ರೈಲ್ವೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 1ರಿಂದ ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳಿಗೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಇ ಬುಕ್ಕಿಂಗ್ ಆರಂಭವಾಗಿದೆ. 

ಈ ಕುರಿತು ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು, ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದಾಗಿದೆ. 

ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಕೂಡ ಜೂನ್ 1ರಿಂದ ಸಂಚರಿಸಲಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಟಿಕೆಟ್ ದರದಲ್ಲಿ ಊಟದ ದರ ಸೇರಿಸಿಲ್ಲ, ಊಟಕ್ಕೆ ಪ್ರತ್ಯೇಕ ಹಣ ನೀಡಬೇಕಿದೆ. ರೈಲಿನಲ್ಲಿ ಕೆಲವು ಆಹಾರ ಮಾರಾಟದ ವ್ಯವಸ್ಥೆ ಇದೆ, ಉಳಿದಂತೆ ರೈಲು ನಿಲ್ದಾಣದಲ್ಲಿರುವ ಅಂಗಡಿಗಳಲ್ಲಿ ಆಹಾರ ಪದಾರ್ಥ ಮಾರಾಟ ಮಾಡಲಾಗುತ್ತದೆ. ಜೂನ್ 1 ರಿಂದ 200 ರೈಲುಗಳು ಮತ್ತು 16 ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ. ಯಾವುದೇ ರೀತಿಯ ಬ್ಲಾಂಕೆಟ್ ಕೂಡ ನೀಡುವುದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.