ಕೊರೋನಾ ಭೀತಿ: 55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಠಾಣೆಯಲ್ಲೇ ಕೆಲಸ - ಬಸವರಾಜ್ ಬೊಮ್ಮಾಯಿ
55 ವರ್ಷ ಮೇಲ್ಪಟ್ಟ ಸಿಬ್ಬಂದಿ ಪೊಲೀಸ್ ಠಾಣೆಯಲ್ಲೇ ಕಾರ್ಯ ನಿರ್ವಹಿಸಬೇಕು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಮೈಸೂರು: 55 ವರ್ಷ ಮೇಲ್ಪಟ್ಟ ಸಿಬ್ಬಂದಿ ಪೊಲೀಸ್ ಠಾಣೆಯಲ್ಲೇ ಕಾರ್ಯ ನಿರ್ವಹಿಸಬೇಕು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಕೊರೊಬಾ ಭೀತಿ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಕ್ರಮವಹಿಸಿದ್ದರೂ ಸಿಬ್ಬಂದಿಗೆ ಸೋಂಕು ತಗುಲುತ್ತಿದೆ. ಹೀಗಾಗಿ ಹೊಸ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ವಯಸ್ಸಾದವರಿಗೆ ಬಹುಬೇಗನೆ ಸೋಂಕು ತಗುಲುವ ಸಾಧ್ಯತೆ ಇರುವುದರಿಂದ ವೈಜ್ಞಾನಿಕವಾಗಿ ಪಾಳಿಯಲ್ಲಿ ಬದಲಾವಣೆ ಮಾಡಲು ಸೂಚಿಸಲಾಗಿದೆ ಎಂದರು.
ಬಹಳಷ್ಟು ಜನ ಹೊರ ರಾಜ್ಯದಿಂದ ಬರುತ್ತಿದ್ದಾರೆ. ಹೀಗಾಗಿ ಕ್ವಾರಂಟೈನ್ ವಿಚಾರದಲ್ಲಿ ಕಠಿಣ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಇನ್ನು, ತಮಿಳುನಾಡು ರಾಜ್ಯದ ಗಡಿಯಲ್ಲಿ ಅಕ್ರಮ ಪ್ರವೇಶ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಮದ್ಯ ಮಾರಾಟದ ಸಂದರ್ಭದಲ್ಲಿ ಆ ಸಂಖ್ಯೆ ಹೆಚ್ಚಾಗಿದ್ದು, ಸದ್ಯ ಗಡಿಯಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಲ ಗಡಿಗಳಿಗೆ ಸ್ವತಃ ತಾವೇ ತೆರಳಿ ಭದ್ರತೆ ಪರಿಶೀಲನೆ ಮಾಡಿರುವುದಾಗಿ ತಿಳಿಸಿದ ಸಚಿವರು, ಹೊರಗಿನಿಂದ ರಾಜ್ಯ ಪ್ರವೇಶಿಸಿದವರಿಗೆ ಕ್ವಾರಂಟೈನ್ ಕಡ್ಡಾಯ ಎಂದರು. ಪೇದೆಗೆ ಸೋಂಕು ಹಿನ್ನೆಲೆಯಲ್ಲಿ ಅಗತ್ಯವಿದ್ದರೇ ಫ್ರೇಜರ್ ಟೌನ್ ಪೊಲೀಸ್ ಠಾಣೆ ಲಾಕ್ ಡೌನ್ ಮಾಡಲಾಗುವುದು. ಪೇದೆಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದ ಬಳಿಕ ಈ ಕುರಿತು ನಿರ್ಧರಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


