ರಾಜ್ಯ

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ಫ್ಯೂ: ಭಾಸ್ಕರ್ ರಾವ್

ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ನಗರಾದ್ಯಂತ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಶುಕ್ರವಾರ ತಿಳಿಸಿದ್ದಾರೆ.

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ಫ್ಯೂ: ಭಾಸ್ಕರ್ ರಾವ್
ಭಾಸ್ಕರ್ ರಾವ್
Published On :

ಬೆಂಗಳೂರು: ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ನಗರಾದ್ಯಂತ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಶುಕ್ರವಾರ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಸಡಿಲಗೊಳಿಸಿದ್ದರಿಂದ ಯಾರೊಬ್ಬರೂ ವೀಕೆಂಡ್ ಪ್ಲಾನ್ ಮಾಡಬಾರದು. ಸದ್ಯ ನಾವು ಲಾಕ್ ಡೌನ್ 4 ರಲ್ಲಿದ್ದು, ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಆದರೆ, ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

ಅಲ್ಲದೇ, ಅನಗತ್ಯವಾಗಿ ಯಾರು ಕೂಡ ರಸ್ತೆಗೆ ಇಳಿಯಬಾರದು. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ ಎಂದರು.

ಹಣ್ಣು, ತರಕಾರಿ, ಅಗತ್ಯ ವಸ್ತುಗಳು, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ, ದಾದಿಯರು ಹಾಗೂ ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ರವಿವಾರ ಅವಕಾಶ ನೀಡಲಾಗಿದೆ ಎಂದರು.

ಬೆಂಗಳೂರಿನಿಂದ ಭಾನುವಾರವೂ ಶ್ರಮಿಕ ರೈಲು ಹೊರಡಲಿದ್ದು, ಇದಕ್ಕೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.