ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಬಿಎಸ್ ವೈ
ಕೊರೋನಾ ವೈರಸ್ ಲಾಕ್ ಡೌನ್ ಸಿಲುಕಿ ತಮ್ಮ ಸ್ವಗ್ರಾಮಗಳಿಗೆ ತೆರಳಲಾಗದೇ ನಿರಾಶ್ರಿತರಾಗಿರುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಸಿಲುಕಿ ತಮ್ಮ ಸ್ವಗ್ರಾಮಗಳಿಗೆ ತೆರಳಲಾಗದೇ ನಿರಾಶ್ರಿತರಾಗಿರುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, 'ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಕರ್ನಾಟಕ ಸರ್ಕಾರವು ಪರಿಗಣಿಸಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ ಮತ್ತು ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸ ಬೇಕೆಂಬುದು ನನ್ನ ದೃಢ ನಿರ್ಧಾರ. ಈ ಹಿನ್ನೆಲೆಯಲ್ಲಿ ದಿನಾಂಕ: 31-05-2020 ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಮಾಡಿದೆಯಾದರೂ ದುಬಾರಿ ಪ್ರಯಾಣ ದರದಿಂದಾಗಿ ಕಾರ್ಮಿಕರು ತಮ್ಮ ತವರಿಗೆ ಹೋಗಲಾಗದೇ ಪರಿತಪಿಸುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಲಸೆ ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಮನವಿಯನ್ನು ಸರ್ಕಾರ ಪುರಸ್ಕರಿಸಿದೆ.
ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ.
— CM of Karnataka (@CMofKarnataka) May 22, 2020
ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ & ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ.
1/2
2/2
— CM of Karnataka (@CMofKarnataka) May 22, 2020
ಈ ಹಿನ್ನೆಲೆಯಲ್ಲಿ ದಿನಾಂಕ: 31-05-2020 ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.#KarnatakaFightsCorona #IndiaFightsCoronavirus
3/3
— CM of Karnataka (@CMofKarnataka) May 22, 2020
Therefore Karnataka Government will bear the cost of travel of migrant workers and stranded persons to their respective States by Shramik Trains up to 31st may, 2020. #KarnatakaFightsCorona #IndiaFightsCoronavirus
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


