ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಲಿವೆ: ಬಿಬಿಎಂಪಿ ಅಧಿಕಾರಿಗಳು
ಲಾಕ್ ಡೌನ್ ಸಡಿಲಿಸಿದ ನಂತರ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಗಳು ಮತ್ತಷ್ಚು ಹೆಚ್ಚಾಗಲಿವೆ, ಜನರು ಸಾಮಾಜಿಕ ದೂರ ಮತ್ತು ಇತರ ಮಾನದಂಡಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರಕರಣಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ

ಬೆಂಗಳೂರು: ಲಾಕ್ ಡೌನ್ ಸಡಿಲಿಸಿದ ನಂತರ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಗಳು ಮತ್ತಷ್ಚು ಹೆಚ್ಚಾಗಲಿವೆ, ಜನರು ಸಾಮಾಜಿಕ ದೂರ ಮತ್ತು ಇತರ ಮಾನದಂಡಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರಕರಣಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಪ್ರಕರಣಗಳು ಹೆಚ್ಚಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡುವುದು ಸವಾಲಿನ ಸಂಗತಿ, ಕೇವಲ ವಲಸೆ ಕಾರ್ಮಿಕರಿಂದ ಸೋಂಕು ಹೆಚ್ಚುವುದಿಲ್ಲ ಸ್ಥಳೀಯರಿಂದಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಸೋಂಕಿತರ ಸಂಪರ್ಕ ಪತ್ತೆಹಚ್ಚಲು ಬಿಬಿಎಂಪಿ ಸಿಬ್ಬಂದಿ ತೀವ್ರವಾಗಿ ಕೆಲಸ ಮಾಡುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯಕ್ತ ರವಿಕುಮಾರ್ ಸುರ್ ಪುರ ತಿಳಿಸಿದ್ದಾರೆ.
ಜನರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು, ಸದ್ಯ ಸಮುದಾಯ ಹಂತದಲ್ಲಿ ಪ್ರಕರಣ ಹಬ್ಬಿಲ್ಲ, ಮುಂದೆಯೂ ಹಬ್ಬಬಾರದು ಎಂದಾದರೇ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ಸಂಪೂರ್ಣ ಅಪಾರ್ಟ್ಮೆಂಟ್ ಸಂಕೀರ್ಣವನ್ನು ಮುಚ್ಚುವ ಬದಲು, ನಿರ್ದಿಷ್ಟ ಮಹಡಿ ಮತ್ತು ಕೆಳಗಿನದನ್ನು ಮಾತ್ರ ಮೊಹರು ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ.
ಪರಿಸ್ಥಿತಿನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಜನರೇ ಸಲಹೆ ಮತ್ತು ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಈ ಮೊದಲು ಒಂದೇ ಒಂದು ಕೊರೋನಾ ಪಾಸಿಟಿವ್ ಪ್ರಕರಣಗಳು ಇರದಿದ್ದ ಪ್ರದೇಶಗಗಳಲ್ಲೂ ಕೂಡ ಕೊರೋನಾ ಪ್ರಕರಣ ಪತ್ತೆಯಾಗುತ್ತಿವೆ, ವಲಯವಾರು ಸಮೀಕ್ಷೆ ಬಗ್ಗೆ ಬಿಬಿಎಂಪಿ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


