ವೇಶ್ಯಾವಾಟಿಕೆಗೆ ಬಲಿಯಾಗುತ್ತಿದ್ದ ನಾಲ್ವರು ಯುವತಿರ ರಕ್ಷಣೆ: ಇಬ್ಬರ ಬಂಧನ
ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಬೆಂಗಳೂರು: ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಶಿವಕುಮಾರ್ (31), ರಂಗಸ್ವಾಮಿ (51) ಬಂಧಿತ ಆರೋಪಿಗಳು. ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೋಮ್ ಟೌನ್ ಪಕ್ಕದ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗುರುವಾರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ದಾಳಿ ಸಂದರ್ಭದಲ್ಲಿ ವೇಶ್ಯಾವಾಟಿಕೆ ಗೃಹಕ್ಕೆ ಗಿರಾಕಿ ಬಂದಿದ್ದ ನಾಜಿಮ್ ವುದ್ದೀನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ಕರೆ ತಂದು ವೇಶ್ಯವಾಟಿಕೆ ದಂಧೆಗೆ ದೂಡಿ, ಅಕ್ರಮವಾಗಿ ಆರೋಪಿಗಳು ಹಣ ಸಂಪಾದನೆ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ 3 ಮೊಬೈಲ್ ಫೋನ್, 2,910 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ಸ್ವಾತಿ (36) ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗಾಗಿ ಬಲೆ ಬೀಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾರತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


