ರಾಜ್ಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೀಡುಬಿಟ್ಟ ವಲಸಿಗರು: ಕಾರ್ಮಿಕರ ಸಂಕಷ್ಟಕ್ಕೆ ಮರುಕಪಟ್ಟ ಡಿಕೆಶಿ

ಲಾಕ್‌ಡೌನ್‌ನಿಂದ ಸಿಲುಕಿಕೊಂಡು ಇದೀಗ ತಮ್ಮ ಊರುಗಳಿಗೆ ವಾಪಸ್ಸಾಗಲು ಹೆಸರು ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನು ಇಂದು ಬೆಳಗ್ಗೆ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೀಡುಬಿಟ್ಟ ವಲಸಿಗರು: ಕಾರ್ಮಿಕರ ಸಂಕಷ್ಟಕ್ಕೆ ಮರುಕಪಟ್ಟ ಡಿಕೆಶಿ
ವಲಸೆ ಕಾರ್ಮಿಕರ ಭೇಟಿ ಮಾಡಿದ ಡಿಕೆ ಶಿವಕುಮಾರ್
Published On :

ಬೆಂಗಳೂರು: ಲಾಕ್‌ಡೌನ್‌ನಿಂದ ಸಿಲುಕಿಕೊಂಡು ಇದೀಗ ತಮ್ಮ ಊರುಗಳಿಗೆ ವಾಪಸ್ಸಾಗಲು ಹೆಸರು ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನು ಇಂದು ಬೆಳಗ್ಗೆ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರು ಅರಮನೆ ಬಳಿ ಊರಿಗೆ ತೆರಳಲು ಕಷ್ಟಪಡುತ್ತಿರುವ ಕಾರ್ಮಿಕರು ಹೊರರಾಜ್ಯದ ವಲಸಿಗರನ್ನು ನೋಡಿದರೆ ತಮಗೆ ಹೊಟ್ಟೆ ಉರಿಯುತ್ತದೆ ಎಂದು ಮರುಕಪಟ್ಟರು. ಸರ್ಕಾರ ಹೊರ ರಾಜ್ಯದ ವಲಸಿಗರಿಗೆ ರೈಲು ಟಿಕೆಟ್ ವೆಚ್ಚ ಭರಿಸುವುದಾಗಿ  ಹೇಳಿದ್ದು ಬಿಟ್ಟರೆ ಕೊಟ್ಟಮಾತಿನಂತೆ ನಡೆದುಕೊಂಡಿಲ್ಲ. ನೆಲೆಯೂ ಇಲ್ಲದೇ ಊರಿಗೂ ತೆರಳಲೂ ಸಾಗದೇ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಪಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಹೊರ ರಾಜ್ಯದ ವಲಸಿಗರ ರಕ್ಷಣೆ ಮಾಡಲು ಸರ್ಕಾರದಿಂದ ಸಾಧ್ಯವಿಲ್ಲ ಎಂಬುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಲಿ. ಸರ್ಕಾರದ ಕೈಯಲ್ಲಿ ಆಗದಿದ್ದನ್ನು ತಾವೇ ಸಾಧಿಸಿ ತೋರುವುದಾಗಿ ಹೇಳಿದರು. ಯಡಿಯೂರಪ್ಪ ಕಣ್ಣು ತೆರೆದು ನೋಡಬೇಕು. ನಾನು ಏನಾದರೂ ಮಾತನಾಡಿದರೆ  ನಿಮ್ಮ ಸಚಿವರು ನನ್ನ ವಿರುದ್ಧ ಮಾತನಾಡುತ್ತಾರೆ. ಸರ್ಕಾರದ ಕೈಯಲ್ಲಿ ಆಗುವುದಿಲ್ಲ ಎಂದರೆ ಸರ್ಕಾರಕ್ಕೆ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಚೆಕ್ ಕೊಡಲು ಸಿದ್ಧ. ಮೊದಲು ಅವರವರ ಊರುಗಳಿಗೆ ಕಳುಹಿಸಿ ಕೊಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಡಿ.ಕೆ ಶಿವಕುಮಾರ್  ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.