ಸೋಂಕು ಹೆಚ್ಚಾದರೆ ಓಪನ್ ಆಸ್ಪತ್ರೆ ಆರಂಭ: ಆರೋಗ್ಯ ಸಚಿವ ಶ್ರೀರಾಮುಲು
ರಾಜ್ಯದಲ್ಲಿ ಜೂನ್ ಮತ್ತು ಜುಲೈನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವ ಮುನ್ಸೂಚನೆ ಇದ್ದು, ಎಲ್ಲ ಜಿಲ್ಲೆಗಳಲ್ಲಿ ಓಪನ್ ಆಸ್ಪತ್ರೆ ಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿ: ರಾಜ್ಯದಲ್ಲಿ ಜೂನ್ ಮತ್ತು ಜುಲೈನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವ ಮುನ್ಸೂಚನೆ ಇದ್ದು, ಎಲ್ಲ ಜಿಲ್ಲೆಗಳಲ್ಲಿ ಓಪನ್ ಆಸ್ಪತ್ರೆ ಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈದಾನ, ಕ್ರೀಡಾಂಗಣದಂತಹ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಇಂತಹ ಮುಕ್ತ ಆಸ್ಪತ್ರೆ ವ್ಯವಸ್ಥೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಕಾರ್ಯಪಡೆ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು, ಗ್ರಾಮೀಣ ಭಾಗಕ್ಕೆ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಎಂಬಿಬಿಎಸ್ ವೈದ್ಯರಂತೆ ಆಯುಷ್ ವೈದ್ಯರ ವೇತನ ತಾರತಮ್ಯ ನಿವಾರಿಸುವ ಕುರಿತು ಮಂಗಳವಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿ.ಶ್ರೀರಾಮುಲು ಹೇಳಿದರು.
ಆಯುಷ್ ವೈದ್ಯರ ಬೇಡಿಕೆ ನ್ಯಾಯಸಮ್ಮತವಾಗಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಜೊತೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರ ಮಧ್ಯೆ ಯಾವುದೇ ತಾರತಮ್ಯವನ್ನು ಮಾಡುವುದಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


