ರಾಜ್ಯದಲ್ಲಿ ಎರಡು ಲಕ್ಷಕ್ಕೇರಿದ ಕೊರೋನಾ ವೈರಸ್ ಸೋಂಕು ಪತ್ತೆ ಪರೀಕ್ಷೆ: ಡಾ.ಕೆ. ಸುಧಾಕರ್
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಪರೀಕ್ಷೆ ಪ್ರಮಾಣ ಎರಡು ಲಕ್ಷ ದಾಟಿದ್ದು, ಸೋಂಕು ಪತ್ತೆ ಮಾಡುವ ಪ್ರಕ್ರಿಯೆಯಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಪರೀಕ್ಷೆ ಪ್ರಮಾಣ ಎರಡು ಲಕ್ಷ ದಾಟಿದ್ದು, ಸೋಂಕು ಪತ್ತೆ ಮಾಡುವ ಪ್ರಕ್ರಿಯೆಯಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕಳೆದ 16 ದಿನಗಳಲ್ಲಿ ಒಂದು ಲಕ್ಷ ಸೋಂಕು ಪತ್ತೆ ಪರೀಕ್ಷೆ ಮಾಡಿದ್ದು, ಈವರೆಗೆ 2.03 ಲಕ್ಷ ಪರೀಕ್ಷೆಗಳು ನಡೆದಿವೆ. ಸೋಂಕು ಪತ್ತೆ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆಯಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇಂದಿಗೆ ರಾಜ್ಯದಲ್ಲಿ 2.03 ಲಕ್ಷ #COVID19 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಕಳೆದ16 ದಿನಗಳಲ್ಲಿ 1ಲಕ್ಷಕ್ಕೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈಗ ನಮ್ಮಲ್ಲಿ 57 ಕೋವಿಡ್ ಲ್ಯಾಬ್ ಕಾರ್ಯನಿರ್ವಹಿಸುತ್ತಿವೆ. ಇದಕ್ಕಾಗಿ ನಮ್ಮ ಎಲ್ಲ ಅಧಿಕಾರಿಗಳು ವೈದ್ಯರು, ಲ್ಯಾಬ್ ಟೆಕ್ನಷಿಯನ್ಸ್ ಗಳ ನಿರಂತರ ಪರಿಶ್ರಮ ಗಳಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


