36 ಗಂಟೆಗಳ ಸಂಪೂರ್ಣ ಲಾಕ್ ಡೌನ್'ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ: ಎಲ್ಲೆಡೆ ಜನರಿಲ್ಲದೆ ಬಿಕೋ ಎನ್ನುತ್ತಿರುವ ರಸ್ತೆಗಳು
ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆಯಿಂದ ಜಾರಿಯಾದ 36 ಗಂಟೆಗಳ ಸಂಪೂರ್ಣ ಲಾಕ್ಡೌನ್ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಜನಜೀವನ ಮಂಕಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆಯಿಂದ ಜಾರಿಯಾದ 36 ಗಂಟೆಗಳ ಸಂಪೂರ್ಣ ಲಾಕ್ಡೌನ್ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಜನಜೀವನ ಮಂಕಾಗಿದೆ.
ಸದಾ ವಾಹನ ಸಂದಣಿಯಿಂದ ಗಿಜಿಗುಡುವ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಬಹಳ ವಿರಳವಾಗಿದೆ. ಇನ್ನು ಬೀದರ್, ಬಳ್ಳಾರಿ ಹಾಗೂ ರಾಮನಗರ ಸಂಪೂರ್ಣ ಸ್ತಬ್ಧವಾಗಿದ್ದು, ಬಸ್ ನಿಲ್ದಾಣಗಳು ಹಾಗೂ ರಸ್ತೆಗಳು ಬಿಕೋ ಎನ್ನುತ್ತಿವೆ.
ಪೊಲೀಸರು ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರಿಗೆ ಎಚ್ಚರಿಸುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಗಳಲ್ಲಿ ವಾಹನ ಓಡಾಟ ಅತ್ಯಂತ ವಿರಳವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


