ಉಡುಪಿ- ಕಾರ್ಕಳದಲ್ಲಿ ಇಬ್ಬರು ಪೊಲೀಸರಿಗೆ ಕೊರೊನಾ ಸೋಂಕು: 3 ಠಾಣೆ ಸೀಲ್‌ಡೌನ್
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹಾಗೂ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಮೂರು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಉಡುಪಿ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹಾಗೂ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಮೂರು ಪೊಲೀಸ್ ಠಾಣೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಕಾರ್ಕಳ ನಗರ ಹಾಗೂ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ಒಂದೇ ಕಟ್ಟಡದಲ್ಲಿ ಇರುವುದರಿಂದ ಈ ಮೂರನ್ನು ಸೀಲ್‌ಡೌನ್ ಮಾಡಲಾಗಿದೆ. ಇದರ ಜತೆಗೆ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐಗೆ ಕೊರೊನಾ ದೃಢ ಪಟ್ಟಿರುವುದರಿಂದ ಅಜೆಕಾರು ಠಾಣೆಯೂ ಸೀಲ್‌ಡೌನ್ ಆಗಿದೆ.
ವೃತ್ತ ನಿರೀಕ್ಷಕರ ಕಚೇರಿ ಹಾಗೂ ಮೂರು ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಸೇರಿ 80ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಇದ್ದಾರೆ. ಇವರಿಬ್ಬರಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದನ್ನು ಜಿಲ್ಲಾಡಳಿತ ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದೆ. ಉಳಿದ ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


