ರಾಜ್ಯ

ಘಾಟಿ ಸುಬ್ರಹ್ಮಣ್ಯ: ಹುಡುಗಿಯರ ಜೊತೆ ಜಾಲಿ ರೈಡ್: ಕೆರೆಯಲ್ಲಿ ಮುಳುಗಿ ಮೂವರು ದುರ್ಮರಣ

ಮೋಜು ಮಾಡಲು ಬಂದಿದ್ದ ಮೂವರು ಯುವಕರು ನೀರುಪಾಲಾಗಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಸೋಮವಾರ ಸಂಭವಿಸಿದೆ.

ಘಾಟಿ ಸುಬ್ರಹ್ಮಣ್ಯ: ಹುಡುಗಿಯರ ಜೊತೆ ಜಾಲಿ ರೈಡ್: ಕೆರೆಯಲ್ಲಿ ಮುಳುಗಿ ಮೂವರು ದುರ್ಮರಣ
ಸಂಗ್ರಹ ಚಿತ್ರ
Published On :

ದೊಡ್ಡಬಳ್ಳಾಪುರ: ಮೋಜು ಮಾಡಲು ಬಂದಿದ್ದ ಮೂವರು ಯುವಕರು ನೀರುಪಾಲಾಗಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಸೋಮವಾರ ಸಂಭವಿಸಿದೆ.
 
ಬೆಂಗಳೂರಿನ ರಾಮಮೂರ್ತಿನಗರದ ರಾಜು(19), ಚಂದ್ರು(20) ಮತ್ತು ನವೀನ್(24) ಮೃತ ದುರ್ದೈವಿಗಳು.

ನಾಲ್ಕು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ಸಂದರ್ಭದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.