ಯುವಕನ ಆತ್ಮಹತ್ಯೆ ಕೇಸ್: ಶೋಭಾ ಕರಂದ್ಲಾಜೆ ಟ್ವೀಟ್ ವೈರಲ್; ಯುಟಿ ಖಾದರ್ ಲೇವಡಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ್ದ ಟ್ವೀಟ್ ವೈರಲ್ ಆಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ್ದ ಟ್ವೀಟ್ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಹಾರಿದ್ದ. ನಿಶಾಂತ್ ಹಾರಿದ್ದನ್ನು ನೋಡಿ ರಂಜಾನ್ ಹಬ್ಬದ ಸಡಗರದಲ್ಲಿದ್ದ ಮುಸ್ಲಿಂ ಯುವಕರು ರಕ್ಷಿಸಿದ್ದರು, ನದಿಗೆ ಜಿಗಿದು ಆತನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಶಾಂತ್ ಸಾವನ್ನಪ್ಪಿದ್ದ.
ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವ ಸಮಯದಲ್ಲೇ ಕಿಡಿಗೇಡಿಗಳು ಶೋಭಾ ಕರಂದ್ಲಾಜೆ ಅವರೇ ಟ್ವೀಟ್ ಮಾಡಿದಂತೆ ಸಾಲನ್ನು ಎಡಿಟ್ ಮಾಡಿದ್ದರು. “ಜಿಹಾದಿ ಹಿಂದೂ ಸಂಘಟನೆಯಿಂದ ಕಲ್ಲಡ್ಕದ ನಿಶಾಂತ್ ಎಂಬ ಯುವಕನ ಹತ್ಯೆ ನಡೆದಿದೆ ಎಂಬ ಮಾಹಿತಿ ಬಂದಿದೆ. ಕೂಡಲೇ ಆ ಜಿಹಾದಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ” ಎಂದು ಈ ನಕಲಿ ಟ್ವೀಟ್ ನಲ್ಲಿ ಬರೆಯಲಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಸಂಸದೆ, ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಸ್ವಾಸ್ಥ್ಯ-ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು ಅವರ ವಿಕೃತ ಮನಸ್ಥಿತಿಯನ್ನು ತೆರೆದಿಡುತ್ತದೆ. ಈ ರೀತಿಯ ಫೇಕ್ ನ್ಯೂಸ್ ಗಳ ಮೂಲಕ ಸಮಾಜದ ಸಾಮರಸ್ಯ ಕದಡುತ್ತಿರುವ ಎಲ್ಲಾ ಸಮಾಜ ವಿರೋಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Not even an ounce of sancity left in congress!!
At any cost @INCIndia wnts d communities in the society to be divided.
INC leader @utkhader tweets an edited tweet in my name with a motive of disturbing social harmony.
Askd @compolmlr to book charges against #FakeNews Peddlers. pic.twitter.com/P6QBwI0ErG
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


