ಅಕ್ರಮ - ಸಕ್ರಮ ರಾಜ್ಯಾದ್ಯಂತ ವಿಸ್ತರಣೆ: ಬೈರತಿ ಬಸವರಾಜ್
ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ದಾವಣೆಗೆರೆ: ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.
ದಾವಣೆಗೆರೆಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ ಇತರೆ ಮಹಾನಗರ ಪಾಲಿಕೆ, ನಗರ ಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ಕಲ್ಪಿಸಲು ಅನುಕೂಲವಾಗುವಂತೆ ಇಷ್ಟರಲ್ಲಿಯೇ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಈಗಾಗಲೇ ಬೆಂಗಳೂರಿನಲ್ಲಿ ಬಿಡಿಎನಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗಿದೆ ಇದನ್ನು ರಾಜ್ಯವ್ಯಾಪಿ ಮಾಡುವ ಉದ್ದೇಶವಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡಾ ಬರಲಿದೆ.ಜೊತೆಗೆ ಬಡಜನರಿಗೂ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


