ಕೊರೋನಾ ಸೋಂಕು ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ: ಕೇಂದ್ರ ಸರ್ಕಾರದಿಂದ ಸಿಕ್ಕಿತು ಪ್ರಶಂಸೆ
ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಬೆಂಗಳೂರು: ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.
ಬೆಂಗಳೂರು ಈ ಕಿರೀಟವನ್ನು ಜೈಪುರ್, ಇಂದೋರ್ ಮತ್ತು ಚೆನ್ನೈ ನಗರಗಳೊಂದಿಗೆ ಹಂಚಿಕೊಂಡಿದೆ. ಸೋಂಕಿತರನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಕೇರಳ ಮಾದರಿಯನ್ನು ಅನುಸರಿಸಿದರೆ ಕೇರಳದ ಯಾವ ನಗರ ಕೂಡ ಕೇಂದ್ರ ಸರ್ಕಾರದ ಪಟ್ಟಿಯಲ್ಲಿ ಇಲ್ಲದಿರುವುದು ವಿಶೇಷ.
ಇಲ್ಲಿ ತಂತ್ರಜ್ಞಾನವನ್ನು ಸಾಧ್ಯವಾದಷ್ಟು ಮಟ್ಟಿಗೆ ಬಳಸಿಕೊಂಡು ಕೊರೋನಾ ಸೋಂಕಿತರನ್ನು ನಿಭಾಯಿಸುವಲ್ಲಿ ಮತ್ತು ಅವರಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ಸು ಕಂಡಿದೆ. ಇಲ್ಲಿನ ಸರ್ಕಾರಿ ಅಧಿಕಾರಿಗಳು ಮುಂಬೈ, ಹೈದರಾಬಾದ್, ದೆಹಲಿ ಮತ್ತು ಅಹಮದಾಬಾದ್ ನಗರಗಳ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.
ಬೆಂಗಳೂರಿನ ಬಗ್ಗೆ ಈ ಮಾಹಿತಿ ಸಿಕ್ಕಿದ್ದು ಆರೋಗ್ಯ ಇಲಾಖೆ ಸಚಿವ ಬಿ ಶ್ರೀರಾಮುಲು ಅವರಿಗೆ ನಿನ್ನೆ. ಬೆಂಗಳೂರು ನಗರದಲ್ಲಿ ನಿನ್ನೆಯವರೆಗೆ 274 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು 149 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 9 ಸಾವು ಸಂಭವಿಸಿದೆ. ನಗರದಲ್ಲಿ 1.3 ಕೋಟಿ ಜನಸಂಖ್ಯೆಯಿದ್ದು ಬಿಬಿಎಂಪಿ 23 ಕಂಟೈನ್ ಮೆಂಟ್ ಪ್ರದೇಶಗಳನ್ನು ಗುರುತಿಸಿದೆ.
ಕೇಂದ್ರ ಸರ್ಕಾರದ ಪ್ರಶಂಸೆಗೆ ಕಾರಣವಾದ ಅಂಶಗಳು:
ಕಂಟೈನ್ ಮೆಂಟ್ ಪ್ರದೇಶಗಳನ್ನು ತಕ್ಷಣವೇ ಗುರುತಿಸಿ ಘೋಷಿಸಿ ಕ್ರಮ ಕೈಗೊಂಡಿದ್ದು
ಜ್ವರದ ಕ್ಲಿನಿಕ್ ಮತ್ತು ಕೋವಿಡ್-19 ಆಸ್ಪತ್ರೆಗಳನ್ನು ಸ್ಥಾಪಿಸಿದ್ದು.
ಸೋಂಕಿತರ ಪತ್ತೆಗೆ ತಂತ್ರಜ್ಞಾನ ಬಳಸಿ ಸ್ಥಳಕ್ಕೆ ಹೋಗುವ ಸಿಬ್ಬಂದಿಗಳ ಸದ್ಭಳಕೆ
ಉತ್ತಮ ಚಿಕಿತ್ಸೆಗೆ ವೈದ್ಯಕೀಯ ತಜ್ಞರ ತಂಡ ರಚನೆ
ಸೋಂಕಿತರ ಪತ್ತೆಗೆ ಕೇರಳ ಮಾದರಿ ಅನುಸರಿಸಿದ ಬೆಂಗಳೂರು
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೊರೋನಾ ಸೋಂಕಿತರ ಸಂಖ್ಯೆ ಇಲ್ಲಿ ಅಧಿಕ ಪ್ರಮಾಣದಲ್ಲಿ ಹೆಚ್ಚಾಗಲಿಲ್ಲ, ಇದಕ್ಕೆ ನಗರದಲ್ಲಿ ಅಳವಡಿಸಿಕೊಂಡ ಕ್ರಮಗಳನ್ನು ಕೇಂದ್ರ ಸರ್ಕಾರ ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


