ಕೋಲಾರ: ಭೀಕರ ರಸ್ತೆ ಅಪಘಾತ ಇಬ್ಬರು ಸವಾರರು ಸಾವು
ಬೈಕ್ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಡಿಕಣ್ಣೂರು ಕೆರೆ ಏರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಕೋಲಾರ: ಬೈಕ್ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಡಿಕಣ್ಣೂರು ಕೆರೆ ಏರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ 21ವರ್ಷದ ಶ್ರೀನಿವಾಸ್ ಮತ್ತು ನಂದೀಶ್ (25) ಮೃತ ದುರ್ದೈವಿಗಳು.
ಮೃತರಿಬ್ಬರು ಸ್ನೇಹಿತರಾಗಿದ್ದು, ಬೈಕ್‌ನಲ್ಲಿ ಶ್ರೀನಿವಾಸಪುರಕ್ಕೆ ಹೋಗಿ ನಗರಕ್ಕೆ ವಾಪಸ್ಸಾಗುತ್ತಿದ್ದಾಗ ಸರಕು ಸಾಗಣೆ ವಾಹನ ಇವರ ಬೈಕ್‌ಗೆ ಎದುರುಗಡೆಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಶ್ರೀನಿವಾಸ್ ಮತ್ತು ನಂದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಕೋಲಾರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತವಾಗುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


