ರಾಜ್ಯ

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ 16 ವರ್ಷದ ಅಪ್ರಾಪ್ತ ಬಾಲಕಿ

ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ.

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ 16 ವರ್ಷದ ಅಪ್ರಾಪ್ತ ಬಾಲಕಿ
ಸಂಗ್ರಹ ಚಿತ್ರ
Published On :

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ. 

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಯ ಸೋಮನಹಳ್ಳಿ ಗ್ರಾಮದಿಂದ ಕೆಲ ದಿನಗಳ ಹಿಂದಷ್ಟೇ ಬಾಲಕಿ ಕಲಬುರಗಿಗೆ ಬಂದಿದ್ದು, ಬಳಿಕ ಆಕೆಯನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು. 

ತನ್ನ ಪೋಷಕರೊಂದಿಗೆ ಇತ್ತೀಚೆಗಷ್ಟೇ ಬಂದಿದ್ದ ಬಾಲಕಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಇತರೆ ಮಹಿಳೆಯರೇ ಆಕೆಗೆ ಹೆರಿಗೆ ಮಾಡಿಸಲು ಸಹಕರಿಸಿದ್ದಾರೆ. 

ಈ ಕುರಿತು ಶಹಬಾದ್ ತಹಶೀಲ್ದಾರ್ ಸುರೇಶ್ ವರ್ಮಾ ಅವರು ಪ್ರತಿಕ್ರಿಯೆ ನೀಡಿದ್ದು, ಸೋಮನಹಳ್ಳಿಯಲ್ಲಿ ಬಾಲಕಿಯ ತಂದೆ ಹಾಗೂ ಸಹೋದರ ಕೆಲಸದ ನಿಮಿತ್ತ ಹೋಗಿ ಬಂದಿದ್ದು, ಬಳಿಕ ಮೂವರನ್ನು ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಬಾಲಕಿಗೆ ಹೆರಿಗೆಯಾಗಿದ್ದು, ಇದೀಗ ತಾಯಿ ಹಾಗೂ ಮಗು ಆರೋಗ್ಯವಾಗಿದೆ. ಶಹಬಾದ್ ಸಮುದಾಯ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.