ರಾಜ್ಯ

ಚನ್ನಪಟ್ಟಣ: ವೃದ್ಧೆ ಮೇಲೆ ಕರಡಿ ದಾಳಿ

ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ಚನ್ನಪಟ್ಟಣ: ವೃದ್ಧೆ ಮೇಲೆ ಕರಡಿ ದಾಳಿ
ಕರಡಿ
Published On :

ರಾಮನಗರ: ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ (65) ಮೇಲೆ ಕರಡಿ ದಾಳಿ ನಡೆಸಿ ಅವರ ಮುಖಕ್ಕೆ ಪರಚಿದ್ದು,ಪರಿಣಾಮವಾಗಿ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಕೂಡಲೇ ಅವರ ರಕ್ಷಣೆಗೆ ದೌಡಾಯಿಸಿದ ಮಗ ಸುಧೀರ್ (40) ಅವರ ಮೇಲೂ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ.

ಸಾಕಮ್ಮ ಅವರು ಬೆಳಗ್ಗೆ ಮನೆಯಿಂದ ಹೊರಗೆ ಬಂದ ಸಂದರ್ಭದಲ್ಲಿ ಕಾಂಪೌಂಡ್ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ.

ಸದ್ಯ ಸಾಕಮ್ಮ ಅವರನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಮಹಮ್ಮದ್ ಮನ್ಸೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.