ರಾಜ್ಯ

ಕೊರೋನಾಗೆ ಮತ್ತೊಂದು ಸಾವು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಗೆ ರಾಜ್ಯದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಬೀದರ್ ನಲ್ಲಿ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾಗೆ ಮತ್ತೊಂದು ಸಾವು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ
ಕೊರೋನಾ ವೈರಸ್ ಆರ್ಭಟ
Published On :

ಬೀದರ್: ಮಾರಕ ಕೊರೋನಾ ವೈರಸ್ ಗೆ ರಾಜ್ಯದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಬೀದರ್ ನಲ್ಲಿ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮೂಲಗಳ ಪ್ರಕಾರ ಬೀದರ್‌ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. ಅವರನ್ನು P-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ  ಫಲಕಾರಿಯಾಗದೆ ಬ್ರೀಮ್ಸ್‌ನ ಐಸೋಲೇಷನ್ ವಾರ್ಡಿನಲ್ಲಿ ಇಂದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರೋಗ್ಯ ಇಲಾಖೆ ನಿಯಮದಂತೆ ಇಂದು ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. 

ಈ ಮೂಲಕ ಬೀದರ್ ಜಿಲ್ಲೆಯಲ್ಲಿ ಕೊರೋನಾಗೆ ಮೂರನೇ ಬಲಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 45ಕ್ಕೆ ಏರಿಯಾದಂತಾಗಿದೆ. ಅಂತೆಯೇ ಆರೋಗ್ಯ ಇಲಾಖೆಯ ಮಂಗಳವಾರದ ವರದಿ ಅನ್ವಯ ಬೀದರ್ ನಲ್ಲಿ ಸೋಂಕಿತರ ಸಂಖ್ಯೆ 95ಕ್ಕೆ  ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.