ಮಾವಿನ ಹಣ್ಣಿನಲ್ಲಿ ಕೊರೋನಾ ಸೋಂಕು ಬರುವುದಿಲ್ಲ: ಸಚಿವ ನಾರಾಯಣಗೌಡ ಸ್ಪಷ್ಟನೆ
ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರು: ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ನಿನ್ನೆ ಮಂಡ್ಯದಲ್ಲಿ ತಾವು ಆಡಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸುಮಾರು 14 ಜನ ಸೇರಿ ಅಲ್ಲಿ ಸಭೆ ಮಾಡಿದ್ದರು. ಈ ವೇಳೆ ಮಾವಿನ ಹಣ್ಣನ್ನು ಕಟ್ ಮಾಡಿ ಹಂಚಿಕೊಂಡು ತಿಂದಿದ್ದರು. ಇದರಿಂದಾಗಿ ಅವರೆಲ್ಲರಿಗು ಪರಸ್ಪರ ಸೋಂಕು ಹರಡಿರಬಹುದು ಎಂದೂ, ಅವರನ್ನು ಕ್ವಾರಂಟೈನ್ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದೆ. ಮಾವಿನ ಹಣ್ಣಿನಿಂದ ಕೊರೋನಾ ಬರಲ್ಲ. ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


