ಸಾಂತ್ವನ ಕೇಂದ್ರಗಳನ್ನು ಮುಂದುವರೆಸಲು ಮುಖ್ಯಮಂತ್ರಿಗಳ ಸೂಚನೆ
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೂಚಿಸಿದರು.

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒನ್ ಸ್ಟಾಪ್ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ ಸಾಂತ್ವನ ಯೋಜನೆಯನ್ನು ಸ್ಥಗಿತಗೊಳಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಾಂತ್ವನ ಯೋಜನೆ ನೆರವು ನೀಡುತ್ತಿರುವುದರಿಂದ ಈ ಯೋಜನೆಯನ್ನು ಮುಂದುವರೆಸಲು ತೀರ್ಮಾನಿಸಲಾಯಿತು.
ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡು ಸುಕನ್ಯಾ ಸಮೃದ್ಧಿ ಯೋಜನೆಯಡಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕೋವಿಡ್ 19 ಹಿನ್ನೆಲೆಯಲ್ಲಿ ಉಂಟಾದ ಲಾಕ್‍ಡೌನ್ ಸಂದರ್ಭದಲ್ಲಿ ಇಲಾಖೆಯು ಆಹಾರ ಧಾನ್ಯಗಳನ್ನು ಪ್ರತಿ ಫಲಾನುಭವಿಗಳ ಮನೆ ಬಾಗಿಲಿಗೆ ವಿತರಿಸಿದೆ. ಇದೇ ಅವಧಿಯಲ್ಲಿ 278 ಬಾಲ್ಯ ವಿವಾಹಗಳನ್ನು ತಡೆಹಿಡಿಯಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮಾಸ್ಕ್ ಗಳನ್ನು ಹೊಲಿದು ವಿತರಿಸಿದ್ದಾರೆ ಎಂದು ಸಚಿವರಾದ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು.
ಸಭೆಯಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿರ್ದೇಶಕ ಕೆ.ಎ.ದಯಾನಂದ್ , ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


