ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ: ಅಧಿಕಾರಿಯಿಂದ ದೂರು ದಾಖಲು
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ಎಂಬುವವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಕಲಬುರಗಿ: ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ಎಂಬುವವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.
ರಾತ್ರಿ ಹಲವು ಬಾರಿ ತಮಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರಿಗೆ ರಾತ್ರಿ 3 ಗಂಟೆಗೆ ದೂರು ನೀಡಿದ್ದಾರೆ. ಶಾಸಕ ಪಾಟೀಲ ಬಡವರಿಗಾಗಿ ದಿನಸಿ ಕಿಟ್ ನೀಡುತ್ತಿದ್ದು, ಅದಕ್ಕಾಗಿ ನೆರವು ನೀಡುವಂತೆ ತಮ್ಮ ಆಪ್ತಸಹಾಯಕ ಪ್ರವೀಣ ಮೂಲಕ ಸಂಗಾ ಅವರಿಗೆ ಕರೆ ಮಾಡಿಸಿದ್ದರು. ಆದರೆ ಸಂಗಾ ಹಣ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಹಲವು ಬಾರಿ ತಮಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಸಂಗಾ ದೂರು
ದಾಖಲಿಸಿದ್ದಾರೆ.
ಆದರೆ ಅಧಿಕಾರಿಯ ಆರೋಪವನ್ನು ಶಾಸಕ ದತ್ತಾತ್ರೇಯ ಪಾಟೀಲ ಅಲ್ಲಗಳೆದಿದ್ದಾರೆ. ಸೋಂಕಿತರನ್ನು ತನ್ನ ಕ್ಷೇತ್ರದಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ಜನ ವಿರೋಧಿಸಿದ್ದರಿಂದ ಬೇಡವೆಂದು ಹೇಳಿರೋದಾಗಿ ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


