ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೆ ಕೊರೋನಾ ಪಾಸಿಟಿವ್: ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಸೇಂಕಿನ ಆತಂಕ
ಪಾದರಾಯನಪುರ ವಾರ್ಡ್'ನ ಜೆಡಿಎಸ್ ಪಕ್ಷದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾರಲ್ಲಿ ಶುಕ್ರವಾರ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು, ಇದೀಗ ಜೆಜೆ ನಗರ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳಲ್ಲಿಯೂ ಕೊರೋನಾ ವೈರಸ್ ಭೀತಿ ಶುರುವಾಗಿದೆ.

ಬೆಂಗಳೂರು: ಪಾದರಾಯನಪುರ ವಾರ್ಡ್'ನ ಜೆಡಿಎಸ್ ಪಕ್ಷದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾರಲ್ಲಿ ಶುಕ್ರವಾರ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು, ಇದೀಗ ಜೆಜೆ ನಗರ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳಲ್ಲಿಯೂ ಕೊರೋನಾ ವೈರಸ್ ಭೀತಿ ಶುರುವಾಗಿದೆ.
ರಾಜ್ಯದಲ್ಲಿ ಜನಪ್ರತಿನಿಧಿಯೊಬ್ಬರಲ್ಲಿ ವೈರಸ್ ದೃಢಪಟ್ಟಿರುವುದು ಇದೇ ಮೊದಲಾಗಿದೆ. ಈ ನಡುವೆ ಇಮ್ರಾನ್ ಪಾಷಾ ಅವರೊಂದಿಗೆ ಸಂಪರ್ಕದಲ್ಲಿದ್ದ ಅವರ ಪತ್ನಿ, ಇಬ್ಬರು ಮಕ್ಕಳು, ಕಾರು ಚಾಲಕ, ಮನೆ ಕೆಲಸದ ಸಿಬ್ಬಂದಿ, ಬೆಂಬಲಿಗರು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಪಾದರಾಯನಪುರ ಸೀಲ್'ಡೌನ್ ಮಾಡಿದ ಬಳಿಕ ಕೂಡ ಪಾಷಾ ವಾರ್ಡ್'ನ ಸೋಂಕಿತ ಪ್ರದೇಶದಲ್ಲಿ ಓಡಾಟ ನಡೆಸಿದ್ದರು. ಹೀಗಾಗಿ ಸೋಂಕು ತಗುಲಿರಬಹುದು ಎಂದು ಹೇಳಲಾಗುತ್ತಿದೆ.
ಪಾದರಾಯನಪುರದ ವಾರ್ಡ್ ನಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ಕುರಿತು ಬಿಬಿಎಂಪಿ ಪಶ್ಚಿಮ ವಲಯದ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಆರೋಗ್ಯ ಅಧಿಕಾರಿಗಳು, ಜೆಜೆ ನಗರದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ್ದರು. ಈ ಸಭೆಗೆ ಪಾಲಿಕೆ ಸದಸ್ಯನಾಗಿದ್ದ ಕಾರಣ ಇಮ್ರಾನ್ ಪಾಷಾ ಅವರು ಕೂಡ ಪಾಲ್ಗೊಂಡಿದ್ದರು. ಕಳೆದೊಂದು ವಾರದಲ್ಲಿ ಇಮ್ರಾನ್ ಅವರು ಮೂರು ಬಾರಿ ಬಿಬಿಎಂಪಿ ಕೇಂದ್ರ ಕಚೇರಿಗೂ ಭೇಟಿ ನೀಡಿದ್ದು, ಇದೀಗ ಅಧಿಕಾರಿಗಳಲ್ಲಿಯೂ ಕೊರೋನಾ ಭೀತಿ ಶುರುವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


