ಬೆಂಗಳೂರು: ಅನೈತಿಕ ಸಂಬಂಧ ಶಂಕೆ, ವ್ಯಕ್ತಿ ಬರ್ಬರ ಕೊಲೆ
ನಗರದಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಂಗಳೂರು: ನಗರದಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
30 ವರ್ಷದ ಸುಭಾನ್ ಕೊಲೆಯಾಗಿದ್ದು, ಅನೈತಿಕ ಸಂಬಂಧದಿಂದ ಹತ್ಯೆಯಾಗಿರಬಹುದು ಎಂದು ಶಂಕಿಸಲಾಗಿದೆ.
ಶನಿವಾರ ಮಧ್ಯಾಹ್ನ ಡಿಜೆ ಹಳ್ಳಿಯ ಶ್ಯಾಂಪುರ ರೈಲ್ವೇ ಗೇಟ್ ಬಳಿ ಈತನನ್ನುಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲ್ಲಲಾಗಿತ್ತು. ರಕ್ತಸಿಕ್ತವಾಗಿದ್ದ ದೇಹವೊಂದು ಗಟಾರದಲ್ಲಿ ಬಿದ್ದಿತ್ತು. ಇದನ್ನು ನೋಡಿದ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆದರೆ ಪೋಲೀಸರ ತನಿಖೆ ನಡೆಸಿದಾಗ ಇದು ರೈಲ್ವೇ ಗೇಟ್ ಬಳಿ ನಡೆದ ಕೊಲೆಯಲ್ಲ, ಬೇರೆಡೆ ಕೊಲೆ ಮಾಡಿ ಇಲ್ಲಿಗೆ ತಂದು ಹಾಕಲಾಗಿದೆ ಎಂದು ಶಂಕೆ ಬಂದಿದೆ.
ಮೃತ ಸುಭಾನ್ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರದಲ್ಲಿ ಸೈಯದ್ ಎಂಬುವವನೊಡನೆ ಗಲಾಟೆ ನಡೆದಿದೆ. ಇದೇ ವಿಚಾರ ಕೊಲೆಗೆ ಕಾರಣವಾಗಿದೆ ಎಂದು ಪೋಲೀಸರು ಶಂಕಿಸಿದ್ದು ಡಿಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


