ತಳವಾರ,ಪರಿವಾರ,ಸಿದ್ದಿ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ
ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.
ಈ ಕುರಿತು ಗಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ.
ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಹಿಂದುಳಿದ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


