ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ನೋಟಿಸ್ ಅಂಟಿಸಿದ ಸಿಸಿಬಿ
ಡಿ.ಜೆ. ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿಸಿದ ಆರೋಪ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ಇಂದು ಸಿಸಿಬಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಬೆಂಗಳೂರು: ಡಿ.ಜೆ. ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿಸಿದ ಆರೋಪ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ಇಂದು ಸಿಸಿಬಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸಂಪತ್ ರಾಜ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿರುವ ಸಿಸಿಬಿ ಎಸಿಪಿ ವೇಣುಗೋಪಾಲ್ ಅವರು ನಗರದ ಫ್ರೇಜರ್ ಟೌನ್ನಲ್ಲಿರುವ ಸಂಪತ್ ರಾಜ್ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ.
ಪ್ರಕರಣದ ತನಿಖೆಗೆ ಬಂದು ಸಹಕರಿಸಬೇಕು. ನೋಟಿಸ್ ತಲುಪಿದ ತಕ್ಷಣ ನಗರ ಚಾಮರಾಜ ಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ತನಿಖೆಗೆ ಹಾಜರಾಗಬೇಕು. ಇಲ್ಲವಾದಲ್ಲಿ ಉದ್ದೇಶ ಪೂರ್ವಕವಾಗಿ ತನಿಖೆಗೆ ಸಹಕಾರ ನೀಡದ ಆರೋಪದಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


