ಅಶೋಕ್ ಗಸ್ತಿಯವರಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಚುನಾವಣೆ ದಿನಾಂಕ ಪ್ರಕಟ
ಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ನವದೆಹಲಿ: ಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ.
ಆಯೋಗದ ಪ್ರಕಟಣೆಯಂತೆ ಡಿಸೆಂಬರ್ 1ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.
ಬಿಜೆಪಿ ಮುಖಂಡರಾದ ಗಸ್ತಿ ಅವರು ಜುಲೈನಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಆದರೆ ಕೋವಿಡ್ -19 ಕಾರಣ ಸಂಸತ್ತಿನ ಯಾವುದೇ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.
ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗುವ ಎಲ್ಲರೂ ಫೇಸ್ ಮಾಸ್ಕ್ ಧರಿಸಬೇಕು ಎಂದು ಆಯೋಗ ಹೇಳಿದೆ.
ಡಿಸೆಂಬರ್ 1ರಂದು ರಾಜ್ಯಸಭೆ ಸ್ಥಾನಕ್ಕಾಗಿನ ಚುನಾವಣೆ ಜತೆಗೇ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಐದು ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ ಎಂದು ಪ್ರಕಟಣೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


