ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿ: ಸಚಿವ ಸಿ.ಟಿ. ರವಿ
ಕರ್ನಾಟಕ ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ.
ಈಕುರಿತಂತೆ ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ, 'ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕ ಸರ್ಕಾರ ಕೂಡ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ. ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಾಗಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ , ಕೇವಲ ಮದುವೆ ಉದ್ದೇಶಕ್ಕಾಗಿ ಮತಾಂತರ ಆಗುವುದನ್ನು ಒಪ್ಪಲಾಗದು ಎಂದು ತೀರ್ಪು ನೀಡಿತ್ತು. ತಮ್ಮ ಮದುವೆ ಬಳಿಕ ಮೂರು ತಿಂಗಳ ರಕ್ಷಣೆ ನೀಡುವಂತೆ ಮನವಿ ಮಾಡಿದ ಜೋಡಿಯೊಂದರ ಅರ್ಜಿಗೆ ಮಧ್ಯಪ್ರವೇಶಿಸಲು ನಿರಾಕರಿಸುತ್ತಾ ಕೋರ್ಟ್ ಈ ತೀರ್ಪು ನೀಡಿತ್ತು.
On lines of Allahabad High Court's order, Karnataka will enact a law banning religious conversions for the sake of marriage.
We will not remain silent when Jihadis strip the dignity of Our Sisters.
Any one involved in the act of conversion shall face severe & swift punishment.
— C T Ravi
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


