ಉಪಚುನಾವಣೆ ಪ್ರಚಾರ ವೇಳೆ ಜನಸಂದಣಿ: ನಾಳೆಯಿಂದ ಕೊರೋನಾ ರ್ಯಾಪಿಡ್ ಟೆಸ್ಟ್'ಗೆ ಸರ್ಕಾರ ನಿರ್ಧಾರ
ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಬಳಿಕ ಉಭಯಕ್ಷೇತ್ರಗಳ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಬಳಿಕ ಉಭಯಕ್ಷೇತ್ರಗಳ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ.
ಉಪಚುನಾವಣೆ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಉಭಯ ಕ್ಷೇತ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಹೀಗಾಗಿ ಮತದಾನದ ಬಳಿಕ ಹೆಚ್ಚು ಸೋಂಕು ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಡಳಿತಗಳು ಅಧಿಕೃತವಾಗಿ ತಿಳಿಸಿದೆ.
ತುಮಕೂರು ಜಿಲ್ಲಾಡಳಿತ ಇದೇ ತಿಂಗಳ 5 ರಂದು ಶಿರಾ ಕ್ಷೇತ್ರದ ಜನರಿಗೆ ರ್ಯಾಪಿಡ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಅಂದು ಶಿರಾ ತಾಲೂಕಿನ ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ರ್ಯಾಪಿಡ್ ಪರೀಕ್ಷೆ ನಡೆಯಲಿದೆ.
ಪಿಡಿಒ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ತಂಡದ ನೇತೃತ್ವದಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಇನ್ನು ರಾಜರಾಜೇಶ್ವರಿ ನಗರದಲ್ಲಿ ಕಳೆದ 15 ದಿನಗಳಿಂದ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಜನ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ, ಮಾಸ್ಕ್ ಧರಿಸದೆ ಇರುವುದರಿಂದ ಸೋಂಕು ಹಬ್ಬುವುದು ಹೆಚ್ಚಾಗುತ್ತಿದೆ. ಉಪ ಚುನಾವಣೆ ಮುಗಿದ ಮೇಲೆ ಹೆಚ್ಚು ಸೋಂಕು ಪರೀಕ್ಷಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


